ETV Bharat / state

ನೇಣು ಬಿಗಿದುಕೊಂಡು ಮಹಿಳಾ ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಆತ್ಮಹತ್ಯೆ

ಅಬಕಾರಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಪಿಎಸ್ಐ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

author img

By

Published : Feb 23, 2020, 3:43 PM IST

Updated : Feb 23, 2020, 11:45 PM IST

lady PST suicide
ನೇಣು ಬಿಗಿದುಕೊಂಡು ಮಹಿಳಾ ಪಿಎಸ್ಐ ಆತ್ಮಹತ್ಯೆ

ಬಸವಕಲ್ಯಾಣ : ಅಬಕಾರಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಪಿಎಸ್ಐ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.

ರೇಖಾ ಕರಣಕುಮಾರ ಕೋರಿ (29) ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪಿಎಸ್ಐ. ಇವರು ಮೂಲತಃ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ಗ್ರಾಮದ ನಿವಾಸಿಯಾಗಿದ್ದು, ಕಳೆದ 8 ತಿಂಗಳಿಂದ ಇಲ್ಲಿಯ ಅಬಕಾರಿ ಇಲಾಖೆಯಲ್ಲಿ ಆರಕ್ಷಕ ಉಪ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು.

lady PST suicide

ಪತಿ ಹಾಗೂ ಕುಟುಂಬ ಸದಸ್ಯರೊಂದಿಗೆ ಬಾಡಿಗೆ ಮನೆಯೊಂದರಲ್ಲಿ ವಾಸಿಸುತಿದ್ದ ಇವರು, ಮನೆಯಿಂದ ಪತಿ ಹೊರಗಡೆ ತೆರಳಿದ್ದಾಗ ಫ್ಯಾನ್​ಗೆ ನೇಣು ಬಿಗಿದುಕೊಂಡಿದ್ದಾರೆ. ತಕ್ಷಣ ಇವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಮಾರ್ಗದಲ್ಲಿಯೇ ಕೊನೆಯುಸಿರೆಳೆದರು.

ಮೃತ ಪಿಎಸ್​ಐಗೆ 7 ವರ್ಷ ಹಾಗೂ ಒಂದೂವರೆ ವರ್ಷದ ಪುತ್ರರಿದ್ದಾರೆ ಎಂದು ಹೇಳಲಾಗಿದೆ. ಆತ್ಮಹತ್ಯೆಗೆ ಪ್ರಮುಖ ಕಾರಣ ತಿಳಿದು ಬಂದಿಲ್ಲ. ನಗರ ಪೊಲೀಸ್ ಠಾಣಾ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Last Updated : Feb 23, 2020, 11:45 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.