ಬಸವಕಲ್ಯಾಣ : ಬಂಜಾರಾ, ಭೋವಿ, ಕೊರಚೆ ಮತ್ತು ಕೊರಮ ಸಮುದಾಯಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡಬೇಕು ಎಂದು ಅಸ್ಪರ್ಶ ಜಾತಿ ಸಮನ್ವಯ ಸಮಿತಿ ಒತ್ತಾಯಿಸಿದೆ.
ಸಮಿತಿ ತಾಲೂಕು ಘಟಕದ ಅಧ್ಯಕ್ಷ ಮನೋಹರ ಮೈಸೆ ನೇತೃತ್ವದಲ್ಲಿ ನಗರದ ಮಿನಿವಿಧಾನ ಸೌಧಕ್ಕೆ ತೆರಳಿದ ಪ್ರಮುಖರ ನಿಯೋಗ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಈ ಸಮುದಾಯದ ಜನರನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವಂತೆ ಬರೆದ ಮನವಿ ಪತ್ರವನ್ನು ಸಹಾಯಕ ಆಯುಕ್ತ ಭಂವರಸಿಂಗ್ ಮೀನಾ ಅವರಿಗೆ ಸಲ್ಲಿಸಿದೆ.
ಬಂಜಾರಾ(ಲಂಬಾಣಿ), ಭೋವಿ, ಕೊರಚ, ಕೊರಮ ಸಮುದಾಯಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡಬೇಕು ಎಂದು ದೇಶದ ಸರ್ವೋಚ್ಚ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಸುಪ್ರೀಂಕೋರ್ಟ್ ತೀಪ೯ನ್ನು ಗೌರವಿಸಿ ಈ ಎಲ್ಲಾ ಸಮುದಾಯಗಳನ್ನು ತಕ್ಷಣ ಪಟ್ಟಿಯಿಂದ ಕೈಬಿಟ್ಟು ಆದೇಶ ಹೊರಡಿಸುವ ಮೂಲಕ ಪರಿಶಿಷ್ಟ ಜಾತಿ ಜನರಿಗೆ ನ್ಯಾಯ ಕಲ್ಪಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.