ಬೀದರ್: ಕುಡಿಯುವ ನೀರಿನ ಬಾಟಲ್ನಲ್ಲಿ ಕಳ್ಳಭಟ್ಟಿ ಸಾರಾಯಿ ಸಾಗಣೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಭಾಲ್ಕಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಬಿರಿ ಗ್ರಾಮದ ರಾಜಕುಮಾರ್ ಅವತಾಡೆ, ಮಹೇಶ ಹಾಗೂ ಮಲ್ಲಿಕಾರ್ಜುನ್ ಬಂಧಿತ ಆರೋಪಿಗಳು.
ಭಾಲ್ಕಿ ಪಟ್ಟಣದಲ್ಲಿ ಡಿವೈಎಸ್ಪಿ ಡಾ.ದೇವರಾಜ್ ಬಿ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದೆ. ಬಂಧಿತ ಆರೋಪಿಗಳಿಂದ ಅಂದಾಜು 40 ಲೀ. ಕಳ್ಳಭಟ್ಟಿ ಸಾರಾಯಿ ಜಪ್ತಿ ಮಾಡಿಕೊಳ್ಳಲಾಗಿದೆ.
ಈ ಕುರಿತು ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.