ಬೀದರ್: ಸುಮಾರು ಎರಡು ತಿಂಗಳಿಂದ ಬೀಗ ಹಾಕಲಾಗಿದ್ದ ಮದ್ಯದಂಗಡಿಗಳು ನಾಳೆಯಿಂದ ತೆರೆಯಲು ಅನುಮತಿ ಸಿಕ್ಕಿದೆ. ಸರ್ಕಾರ ಷರತ್ತುಬದ್ಧ ನಿಯಮಗಳೊಂದಿಗೆ ಅಂಗಡಿ ತೆರೆಯಲು ಅನುಮತಿ ನೀಡಿದ್ದು, ಜನದಟ್ಟಣೆ ನಿಯಂತ್ರಣಕ್ಕೆ ಬ್ಯಾರಿಕೇಡ್ಗಳನ್ನು ಅಳವಡಿಸಲಾಗುತ್ತಿದೆ.
ಅಂಗಡಿಗಳ ಮುಂದೆ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡಲು ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ. ಅಲ್ಲದೇ ಬೀದರ್ಅನ್ನು ಕೆಂಪು ವಲಯದಿಂದ ಹಳದಿ ವಲಯಕ್ಕೆ ಸೇರಿಸಲಾಗಿದ್ದು, ಇದರಿಂದಾಗಿ ವ್ಯಾಪಾರ ವಹಿವಾಟುಗಳಲ್ಲಿ ಸಡಿಲಿಕೆ ನೀಡಲಾಗಿದೆ.
ನಗರದ ಗಾಂಧಿಗಂಜ ಮಾರುಕಟ್ಟೆಯಲ್ಲಿ ಎಂದಿನಂತೆ ವ್ಯಾಪಾರ-ವಹಿವಾಟು ನಡೆದಿದ್ದು ಕಂಡು ಬಂತು. ಮತ್ತೊಂದು ಕಡೆ ಎಪಿಎಂಸಿ ಮಾರುಕಟ್ಟೆಯಲ್ಲಿ ಬಹುತೇಕ ಅಂಗಡಿಗಳು ತೆರೆಯಲಾಗಿದೆ. ಬೀದರ್ ಸಹಜ ಸ್ಥಿತಿಗೆ ಬರುತ್ತಿದೆ. ಲಾಕ್ಡೌನ್ ನಿಯಮ ಉಲ್ಲಂಘಿಸುವವರ ಮೇಲೆ ಪೊಲೀಸರು ತೀವ್ರ ನಿಗಾ ಇರಿಸಿದ್ದಾರೆ.