ಬೀದರ್ : ಕೊರೊನಾ ವೈರಸ್ ತಡೆಗೆ ದೇಶದಾದ್ಯಂತ ಲಾಕ್‌ಡೌನ್ ಜಾರಿಯಲ್ಲಿದೆ. ಇದರಿಂದಾಗಿ ಸಂಕಷ್ಟದಲ್ಲಿರುವ ಹಕ್ಕಿಪಿಕ್ಕಿ ಸಮುದಾಯದ 10ಕ್ಕೂ ಅಧಿಕ ಕುಟುಂಬಗಳಿಗೆ ದಂಪತಿಯೊಂದು ಆಸರೆಯಾಗಿದೆ.
ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ನಾಲಂದಾ ಶಾಲೆಯ ಪಕ್ಕದ 10ಕ್ಕೂ ಅಧಿಕ ಕುಟುಂಬಗಳಿಗೆ ಶ್ರೀದೇವಿ ಹಾಗೂ ಇಮಾನ್ಯುವೇಲ್ ದಂಪತಿ ನಿತ್ಯವೂ ಆಹಾರ, ತರಕಾರಿ ಕಿಟ್‌ಗಳನ್ನು ನೀಡಿ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ.
ಈ ದಂಪತಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸತತ ಒಂದು ವಾರದಿಂದ ಆಹಾರ ಧಾನ್ಯ ಸರಬರಾಜು ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಜೊತೆಗೆ ಲಾಕ್‌ಡೌನ್ ಜಾರಿಯಲ್ಲಿರುವವರೆಗೆ ಈ ಕುಟುಂಬಗಳ ಬದುಕಿಗೆ ಬೇಕಾದ ಅಗತ್ಯ ವಸ್ತುಗಳನ್ನು ಪೂರೈಸುವುದಾಗಿ ದಂಪತಿ ಹೇಳಿಕೊಂಡಿದ್ದಾರೆ.