ಬೀದರ್: ಜಿಲ್ಲೆಯಲ್ಲಿ ಲಾಕ್ ಡೌನ್ ಉಲ್ಲಂಘಿಸಿದ್ದಕ್ಕಾಗಿ 489 ವಾಹನಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಡಿ.ಎಲ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಆದರೂ, ಜನ ಅನಾವಶ್ಯಕವಾಗಿ ರಸ್ತೆಗಿಳಿಯುತ್ತಿದ್ದಾರೆ. ಹೀಗಾಗಿ ವಾಹನಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಇನ್ನು ಮುಂದೆ ಲಾಕ್ ಡೌನ್ ಉಲ್ಲಂಘನೆ ಮಾಡಿದ್ರೆ ಕಠಿ ಕ್ರಮ ಕೈಗೊಳ್ಳಲಾಗುವುದು. ಮದ್ಯ ನಿಷೇಧವಿದ್ದರೂ ಮಾರಾಟ ಮಾಡಲು ಮುಂದಾಗಿದ್ದ ಒಟ್ಟು 12 ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ. ನಿಷೇದಾಜ್ಞೆ ಉಲ್ಲಂಘಿಸಿದ 8 ಜನರ ಮೇಲೆ ಪ್ರತ್ಯೇಕ ಕೇಸ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಬೀದರ್ ನಗರದ ಒಲ್ಡ್ ಸಿಟಿ, ಮನ್ನಾಖೇಳ್ಳಿ ಹಾಗೂ ಬಸವಕಲ್ಯಾಣ ನಗರದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿದ್ದು, ಅಗತ್ಯ ವಸ್ತುಗಳನ್ನು ಜಿಲ್ಲಾಡಳಿತವೆ ಸರಬರಾಜು ಮಾಡ್ತಿರುವುದರಿಂದ ಅನಗತ್ಯವಾಗಿ ಮನೆಯಿಂದ ಹೊರ ಬರುವ ಜನರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ 732 ಸಿಬ್ಬಂದಿಗಳಿಂದ ಬಿಗಿ ಪೊಲೀಸ್ ಬಂದೊಬಸ್ತ್ ಕೈಗೊಳ್ಳಲಾಗಿದೆ ಎಂದರು.