ಬೀದರ್ : ಇತಿಹಾಸ ಪ್ರಸಿದ್ಧ ಕೊಪ್ಪಳದ ಇಟಗಿ ಉತ್ಸವದಲ್ಲಿ ನೀಡುವ ರಾಜ್ಯ ಮಟ್ಟದ ಚಾಲುಕ್ಯ ವಿಕ್ರಮಾದಿತ್ಯ ಪ್ರಶಸ್ತಿಗೆ ಇಲ್ಲಿನ ಶ್ರೀ ಸಿದ್ಧಾರೂಢ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲರಾದ ಮಲ್ಲಿನಾಥ ಮಠಪತಿ ಆಯ್ಕೆಯಾಗಿದ್ದಾರೆ.
ಡಿ.23ರಂದು ಕೊಪ್ಪಳ ಜಿಲ್ಲೆಯ ಇಟಗಿಯಲ್ಲಿ ಈ ಉತ್ಸವ ನಡೆಯಲಿದ್ದು, ಸಾಂಸ್ಕೃತಿಕ ಸಮಿತಿ ಮತ್ತು ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ಜಂಟಿಯಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ವೇದಿಕೆಯಲ್ಲಿ ನಾಡು ನುಡಿಯ ಸೇವೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಶ್ರೀ ಸಿದ್ಧಾರೂಢ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲರಾದ ಮಲ್ಲಿನಾಥ ಮಠಪತಿರವರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಇಟಗಿ ಉತ್ಸವ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಮಹೇಶ ಬಾಬು ಸುರ್ವೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.