ETV Bharat / state

ನಿಯಮ ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆ: 8 ಜನರ ವಿರುದ್ಧ ಪ್ರಕರಣ ದಾಖಲು - ಸಾಮೂಹಿಕ ಪ್ರಾರ್ಥನೆ

ಲಾಕ್​ಡೌನ್​ ಆದೇಶ ಉಲ್ಲಂಘಿಸಿ ನಗರದ ಬಸ್​ ನಿಲ್ದಾಣ ಸಮೀಪದ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದ ಆರೋಪದ ಮೇಲೆ 8 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

mosque
ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ
author img

By

Published : May 5, 2020, 7:55 PM IST

ಬಸವಕಲ್ಯಾಣ: ಕೊರೊನಾ ಹರಡುವ ಭೀತಿ ಹಿನ್ನೆಲೆಯಲ್ಲಿ ಜಾರಿಗೊಳಿಸಲಾದ ಲಾಕ್​ಡೌನ್​ ಆದೇಶ ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದರೆನ್ನಲಾದ 8 ಜನರ ವಿರುದ್ಧ ಇಲ್ಲಿಯ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ಬಸ್ ನಿಲ್ದಾಣ ಸಮೀಪದ ಮಸೀದಿಯೊಂದರಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್​ ಸಾವಿತ್ರಿ ಸಲಗರ್ ಹಾಗೂ ಸಿಪಿಐ ಮಲ್ಲಿಕಾರ್ಜುನ ಯಾತನೂರ, ಪಿಎಸ್ಐ ಸುನಿಲಕುಮಾರ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸುತಿದ್ದ 8 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಆದೇಶ ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆ

ಕೊರೊನಾ ಹರಡುವ ಭೀತಿ ಹಿನ್ನೆಲೆಯಲ್ಲಿ ಮಂದಿರ, ಮಸೀದಿ, ಚರ್ಚ್​ಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಆದರೂ ಬಸ್ ನಿಲ್ದಾಣದ ಸಮೀಪದ ಮಸೀದಿಯೊಂದರಲ್ಲಿ ಸುಮಾರು ಇಪ್ಪತ್ತಕ್ಕೂ ಅಧಿಕ ಜನ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದರು ಎನ್ನಲಾಗಿದೆ.

ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಕೆಲವರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಇನ್ನು ಸ್ಥಳದಲ್ಲಿ ಇದ್ದ ಮುಖಂಡರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.