ಬೀದರ್: ನಗರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ರೀಮ್ಸ್ ಹಾಸ್ಟೆಲ್ನಲ್ಲಿದ್ದ ಮೆಡಿಕಲ್ ವಿದ್ಯಾರ್ಥಿ ಇಂದು ಬೆಳಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶ್ರೀರಾಮ್ (22) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ.
ಶ್ರೀರಾಮ್ ಬೀದರ್ನ ಬ್ರೀಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಅಧ್ಯಯನ ಮಾಡುತ್ತಿದ್ದರು. ಮೂಲತಃ ಬೀದರ್ ಜಿಲ್ಲೆಯ ಚಿಟ್ಟಗುಪ್ಪಾ ತಾಲ್ಲೂಕಿನ ಶ್ರೀರಾಮ್ ತಂದೆಯ ಸಾವಿನಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಎಂಬಿಬಿಎಸ್ ನಲ್ಲಿ ಟಾಪರ್ ಆಗಿದ್ದ ವಿದ್ಯಾರ್ಥಿ ದುಡುಕಿನ ನಿರ್ಧಾರದಿಂದ ಬಾರದಲೋಕಕ್ಕೆ ಪಯಣ ಬೆಳೆಸಿದ್ದಾರೆ. ಘಟನಾ ಸ್ಥಳದಲ್ಲಿ ಸಹ ವಿದ್ಯಾರ್ಥಿಗಳು ಕಣ್ಣೀರು ಹಾಕುತ್ತಿದ್ದಾರೆ. ಸ್ಥಳಕ್ಕೆ ನ್ಯೂ ಟೌನ್ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಬಸವಕಲ್ಯಾಣದಲ್ಲಿ ಹರಿದ ನೆತ್ತರು.. ಕ್ಷುಲ್ಲಕ ಕಾರಣಕ್ಕೆ ಜಗಳ, ಯುವಕನ ಕೊಲೆ