ETV Bharat / state

ಯುಜಿಡಿ ಕಾಮಗಾರಿ ಪರಿಶೀಲಿಸಿದ ಸಚಿವ ಬಿ.ಎ. ಬಸವರಾಜ್: ಕಳಪೆ ಕಾಮಗಾರಿಗೆ ಅಸಮಾಧಾನ

ಬೀದರ್ ನಗರದ ಹೊರವಲಯದ ಗೊರನಳ್ಳಿ ಗ್ರಾಮದ ಬಳಿ ಯುಜಿಡಿ ಕಾಮಗಾರಿಗಳ ಪರಿಶೀಲನೆ ನಡೆಸಿದ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ್, ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯತನಕ್ಕೆ ಬೇಸರ ವ್ಯಕ್ತಪಡಿಸಿದರು.

Minister B A Basavaraj inspection about UDG work at bidar
ಯುಜಿಡಿ ಕಾಮಗಾರಿಗಳ ಪರಿಶೀಲಿಸಿದ ಸಚಿವ ಬಿ.ಎ ಬಸವರಾಜ್
author img

By

Published : Jun 16, 2020, 4:46 PM IST

ಬೀದರ್: ನಗರದಲ್ಲಿ ಕುಡಿಯುವ ನೀರಿನೊಂದಿಗೆ ಕೊಳಚೆ ನೀರು ಮಿಶ್ರಿತಗೊಂಡಿರುವುದನ್ನು ಕಂಡು ಸಚಿವ ಬಿ.ಎ. ಬಸವರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗರದ ಹೊರವಲಯದ ಗೊರನಳ್ಳಿ ಗ್ರಾಮದ ಬಳಿ ಯುಜಿಡಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯತನಕ್ಕೆ ಬೇಸರ ವ್ಯಕ್ತಪಡಿಸಿ, ಸ್ಥಳದಲ್ಲೇ ಇದ್ದ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.

ಯುಜಿಡಿ ಕಾಮಗಾರಿಗಳ ಪರಿಶೀಲಿಸಿದ ಸಚಿವ ಬಿ.ಎ. ಬಸವರಾಜ್
ಈ ಕುರಿತು ಜಿಲ್ಲಾ ಪ್ರವಾಸದ ವೇಳೆಯಲ್ಲಿ ಗ್ರಾಮಸ್ಥರು ಸಚಿವರ ಗಮನ ಸೆಳೆದಿದ್ದರಿಂದ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕನ ಮಾಡಿದರು. ಅಲ್ಲದೆ 15 ದಿನಗಳಲ್ಲಿ ಈ ದುರವಸ್ಥೆ ಸರಿಪಡಿಸಬೇಕು, ಇಲ್ಲದಿದ್ದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ವೇಳೆ ಪರಿಷತ್ ಸದಸ್ಯ ರಘುನಾಥ್ ರಾವ್ ಮಲ್ಕಾಪೂರೆ, ಜಿ.ಪಂ. ಅಧ್ಯಕ್ಷೆ ಗೀತಾ ಚಿದ್ರಿ, ಜಿಲ್ಲಾಧಿಕಾರಿ ರಾಮಚಂದ್ರನ್, ಜಿ.ಪಂ ಸಿಇಓ ಗ್ಯಾನೇಂದ್ರಕುಮಾರ್ ಗಂಗ್ವಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.