ETV Bharat / state

ಬೀದರ್: ಕೈಗಾರಿಕಾ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಜಗದೀಶ್ ಶೆಟ್ಟರ್...

author img

By

Published : Aug 31, 2020, 10:10 PM IST

ಗಡಿ ಭಾಗದ ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು ಸಾರ್ವಜನಿಕ ಸಲಹೆಗಳನ್ನು ಪಡೆದು ಪರಿಗಣಿಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭರವಸೆ ನೀಡಿದ್ದಾರೆ.

Bidar
ಕೈಗಾರಿಕಾ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಜಗದೀಶ್ ಶೆಟ್ಟರ್

ಬೀದರ್: ಗಡಿ ಭಾಗದ ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು ಸಾರ್ವಜನಿಕ ಸಲಹೆಗಳನ್ನು ಪಡೆದು ಪರಿಗಣಿಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭರವಸೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರು, ಉದ್ಯಮಿಗಳು ಹಾಗೂ ಹಿರಿಯ ಕೈಗಾರಿಕೋದ್ಯಮಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬೀದರ್​ನಲ್ಲಿ ಸ್ಥಾಪಿಸಲಾದ ಕೈಗಾರಿಕಾ ವಲಯಕ್ಕೆ ಮರುಸ್ಥಾಪನೆ ಅಗತ್ಯವಿದ್ದು ಹೊಸ ಉದ್ಯಮಿಗಳಿಗೆ ಅವಕಾಶ ನೀಡಲು ಸರ್ಕಾರ ವಿಶೇಷ ಗಮನ ನೀಡುವಂತೆ ಸಂವಾದದಲ್ಲಿ ಕೋರಲಾದ ಮನವಿಗೆ ಸಚಿವ ಜಗದೀಶ್ ಶೆಟ್ಟರ್ ಸ್ಪಂದಿಸಿದ್ದಾರೆ.

ನಂತರ ನಗರದ ಹೊರ ವಲಯದಲ್ಲಿರುವ ಕೊಳಾರ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿದರು. ಕೆಲವೊಂದು ಕಾರ್ಖಾನೆಗಳಲ್ಲಿ ಸಿದ್ಧಪಡಿಸಿದ ವಿಶೇಷ ಸಾಧನೆಗಳನ್ನು ಪರಿಶೀಲನೆ ಮಾಡಿದರು.

ಈ ವೇಳೆಯಲ್ಲಿ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ, ಸಂಸದ ಭಗವಂತ ಖೂಬಾ, ಶಾಸಕ ಬಂಡೆಪ್ಪ ಕಾಶೆಂಪೂರ್, ಪರಿಷತ್​ ಸದಸ್ಯರಾದ ಅರವಿಂದ ಅರಳಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.