ಬೀದರ್: ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಅವರು ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಮೇಲೆ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ದೂರು ಪೆಟ್ಟಿಗೆ ಅಳವಡಿಸಿ ಸಾರ್ವಜನಿಕ ದೂರಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ.
ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕುಡಿಯುವ ನೀರಿನ ಬವಣೆ ಕುರಿತು ಸಾರ್ವಜನಿಕರು ದೂರು ಸಲ್ಲಿಸಿದ್ದರು. ದೂರುಗಳು ಬಂದ 24 ಗಂಟೆಯೊಳಗೆ ಸಚಿವ ಪ್ರಭು ಚವ್ಹಾಣ ಸ್ಥಳಕ್ಕೆ ಭೇಟಿ ನೀಡಿ ಬೋರ್ವೆಲ್ ಯಂತ್ರ ತರಿಸಿ ತಕ್ಷಣ ಕೊಳವೆ ಬಾವಿ ಕೊರೆಯಿಸಲು ಸೂಚನೆ ನೀಡಿದ್ರು. ಈ ಮೂಲಕ ದೂರು ಪೆಟ್ಟಿಗೆಯಲ್ಲಿ ಬಂದ ದೂರಿಗೆ ತುರ್ತು ಪರಿಹಾರ ನೀಡಲಾಗುತ್ತಿದ್ದು ಜನರು ಸಂತಸ ವ್ಯಕ್ತಪಡಿಸಿದ್ದಾರೆ.