ಬೀದರ್: ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಿಗೆ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲೆಯ ಔರಾದ್ ಪಟ್ಟಣದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಸಚಿವರು, ಕೊವಿಡ್-19 ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡಬೇಕು, ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಲೇಬೇಕು ಇದರಿಂದ ವೈಯಕ್ತಿಕ ಜಾಗೃತಿ ವಹಿಸಿಕೊಳ್ಳುವುದಲ್ಲದೆ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಅಗತ್ಯವಾಗಿದೆ ಎಂದರು.
ಇದೇ ವೇಳೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸ್ಕೆಟ್, ಚಾಕಲೇಟ್ ವಿತರಣೆ ಮಾಡಿದರು. ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿರುವ ಮಕ್ಕಳಿಗೆ ಬಿಸ್ಕೇಟ್ ಹಾಗೂ ಚಾಕಲೇಟ್ ವಿತರಣೆ ಮಾಡಲಾಗುವುದು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಚ್.ಸಿ ಚಂದ್ರಶೇಖರ್, ಬಿಇಓ ಮಂಜುನಾಥ್ ಸೇರಿದಂತೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.