ETV Bharat / state

ಬಸವಕಲ್ಯಾಣ ಶಾಸಕ ನಾರಾಯಣರಾವ್ ಸ್ಥಿತಿ ಚಿಂತಾಜನಕ: ಆರೋಗ್ಯ ವಿಚಾರಿಸಿದ ಈಶ್ವರ್ ಖಂಡ್ರೆ - ಈಶ್ವರ್ ಖಂಡ್ರೆ ಟ್ವೀಟ್

ಕೊರೊನಾದಿಂದಾಗಿ ಆಸ್ಪತ್ರೆಗೆ ದಾಖಲಾದ ಶಾಸಕ ನಾರಾಯಣರಾವ್ ಆರೋಗ್ಯದಲ್ಲಿ ಸಾಕಷ್ಟು ಏರಿಳಿತ ಕಂಡುಬಂದ ಹಿನ್ನೆಲೆ ಆಸ್ಪತ್ರೆ ವೈದ್ಯರು ವೆಂಟಿಲೇಟರ್​ನಲ್ಲಿ ಇರಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಅಧಿಕ ರಕ್ತದೊತ್ತಡ ಹಾಗೂ ಮಧುಮೇಹದಿಂದ ಬಳಲುತ್ತಿರುವ ಶಾಸಕರಿಗೆ ಆಸ್ಪತ್ರೆಗೆ ದಾಖಲಾದ ನಂತರ ಶ್ವಾಸಕೋಶದ ಸೋಂಕು ಕೂಡ ಕಾಣಿಸಿಕೊಂಡಿತ್ತು.

narayan rao
narayan rao
author img

By

Published : Sep 23, 2020, 4:21 PM IST

Updated : Sep 23, 2020, 4:45 PM IST

ಬೆಂಗಳೂರು/ಬೀದರ್: ಹಲವು ದಿನಗಳಿಂದ ಕೊರೊನಾ ಚಿಕಿತ್ಸೆಯ ಹೊರತಾಗಿಯೂ ಬಸವಕಲ್ಯಾಣ ಶಾಸಕ ನಾರಾಯಣರಾವ್ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡಿಲ್ಲ. ಬದಲಾಗಿ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂಬ ಮಾಹಿತಿ ಲಭಿಸಿದೆ.

ಬಸವಕಲ್ಯಾಣ ಕ್ಷೇತ್ರದಲ್ಲಿ ಕೊರೊನಾ ಪಾಸಿಟಿವ್ ಬಂದು ಸೆಪ್ಟೆಂಬರ್ 1ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಶಾಸಕರ ಆರೋಗ್ಯದಲ್ಲಿ ಸಾಕಷ್ಟು ಏರುಪೇರುಗಳು ನಂತರದ ದಿನಗಳಲ್ಲಿ ಕಂಡುಬಂದಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಆಸ್ಪತ್ರೆಗೆ ದಾಖಲಾದ ಎರಡನೇ ದಿನವೇ ಇವರ ಆರೋಗ್ಯದಲ್ಲಿ ಸಾಕಷ್ಟು ಏರಿಳಿತ ಕಂಡುಬಂದ ಹಿನ್ನೆಲೆ ಆಸ್ಪತ್ರೆ ವೈದ್ಯರು ವೆಂಟಿಲೇಟರ್​ನಲ್ಲಿ ಇರಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಅಧಿಕ ರಕ್ತದೊತ್ತಡ ಹಾಗೂ ಮಧುಮೇಹದಿಂದ ಬಳಲುತ್ತಿರುವ ಶಾಸಕರಿಗೆ ಆಸ್ಪತ್ರೆಗೆ ದಾಖಲಾದ ನಂತರ ಶ್ವಾಸಕೋಶದ ಸೋಂಕು ಕೂಡ ಕಾಣಿಸಿಕೊಂಡಿತ್ತು.

ಈ ಹಿನ್ನೆಲೆ ಸೆಪ್ಟೆಂಬರ್ 3ರಂದು ಇವರಿಗೆ ಪ್ಲಾಸ್ಮಾ ಚಿಕಿತ್ಸೆಯನ್ನು ಕೂಡ ನೀಡಲಾಗಿದೆ. ಈ ಚಿಕಿತ್ಸೆಗೆ ಸ್ಪಂದಿಸಿದ್ದ ಶಾಸಕರ ಆರೋಗ್ಯ ನಿಧಾನವಾಗಿ ಚೇತರಿಕೆ ಕಾಣುತ್ತಿತ್ತು. ಆದರೆ ಕಳೆದ ಒಂದೆರಡು ದಿನಗಳಲ್ಲಿ ಅವರ ಆರೋಗ್ಯದಲ್ಲಿ ಸಾಕಷ್ಟು ಏರುಪೇರು ಉಂಟಾಗಿದ್ದು, ಇದೀಗ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂಬ ಮಾಹಿತಿ ಸಿಕ್ಕಿದೆ.

ಆರೋಗ್ಯ ವಿಚಾರಿಸಿದ ಈಶ್ವರ್ ಖಂಡ್ರೆ

ಆರೋಗ್ಯ ವಿಚಾರಿಸಿದ ಖಂಡ್ರೆ:

ಶಾಸಕರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿರುವ ಬಗ್ಗೆ ಮಾಹಿತಿ ಪಡೆದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ವೈದ್ಯರಿಂದ ಮಾಹಿತಿ ಪಡೆದಿದ್ದಾರೆ.

ಬಳಿಕ ಈ ಕುರಿತಂತೆ ಅವರು ಟ್ವೀಟ್ ಮಾಡಿದ್ದು, ಬಸವ ಕಲ್ಯಾಣ ಶಾಸಕರಾದ ಬಿ ನಾರಾಯಣ್ ರಾವ್ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ವೈದ್ಯರಾದ ಡಾ. ಮಹೇಶ್ ಅವರ ಜೊತೆ ಮಾತನಾಡಿ ಶಾಸಕರ ಆರೋಗ್ಯದ ಬಗ್ಗೆ ವಿಚಾರಿಸದ್ದೇನೆ. ಐಸಿಯುನಲ್ಲಿದ್ದ ನಾರಾಯಣ್ ರಾವ್ ಅವರ ಸ್ಥಿತಿಯನ್ನ ವಿಡಿಯೋ ಕಾಲ್ ಮೂಲಕವೇ ಗಮನಿಸಿದ್ದೇನೆ. ಭಗವಂತ ಅವರಿಗೆ ಆಯುರಾರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಸದ್ಯ ಶಾಸಕ ನಾರಾಯಣರಾವ ಸ್ಥಿತಿ ಚಿಂತಾಜನಕವಾಗಿದ್ದು ವೈದ್ಯರು ಯಾವುದೇ ಭರವಸೆ ನೀಡುತ್ತಿಲ್ಲ. ಕುಟುಂಬ ಸದಸ್ಯರು ಹಾಗೂ ಕ್ಷೇತ್ರದ ಅಭಿಮಾನಿಗಳು, ಕಾರ್ಯಕರ್ತರು ಸಾಕಷ್ಟು ಆತಂಕಕ್ಕೆ ಒಳಗಾಗಿದ್ದಾರೆ.

Last Updated : Sep 23, 2020, 4:45 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.