ನವದೆಹಲಿ: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್ಟಿ)ಕ್ಕೆ ಸೇರಿಸಲು ಬೀದರ್ ಲೋಕಸಭಾ ಕ್ಷೇತ್ರದ ಸಂಸದ ಭಗವಂತ ಖೂಬಾ ಆಗ್ರಹಿಸಿದ್ದಾರೆ.
ಇಂದು ನಡೆದ ಲೋಕಸಭೆಯ ಕಲಾಪದಲ್ಲಿ ಮಾತನಾಡಿದ ಅವರು, ಕರ್ನಾಟಕದ ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿರುವ ಕುರುಬ ಸಮುದಾಯವು ಸ್ವತಂತ್ರ ಪೂರ್ವದಲ್ಲಿ ನಿಜಾಮನ ಆಳ್ವಿಕೆಯ ನಂತರ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಂಡಿತ್ತು. ಅದರ ಪರ್ಯಾಯ ಪದ ಕುರುಬ ಇದ್ದು, ಆದ್ದರಿಂದ ಮೂರು ಜಿಲ್ಲೆಗೊಳಪಡುವ ಕುರುಬರನ್ನು ಎಸ್ಟಿಗೆ ಸೇರಿಸುವಂತೆ ಆಗ್ರಹಿಸಿದರು.