ಬೀದರ್: ಸ್ಥಳೀಯ ದಿನ ಪತ್ರಿಕೆ ಸಂಪಾದಕರೊಬ್ಬರನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ಮಂಗಲಪೇಟ್ ಹೊರವಲಯದ ನಿರ್ಜನ ಪ್ರದೇಶದಲ್ಲಿ ಮೃತ ದೇಹ ಪತ್ತೆಯಾಗಿದೆ. ಬೀದರ್ನ ವಿಜಯಧ್ವನಿ ಎಂಬ ದಿನ ಪತ್ರಿಕೆಯ ಸಂಪಾದಕರಾದ ರವೀಶ್ ಪಂಡಿತ್(39) ಹತ್ಯೆಯಾದವರು. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪೊಲೀಸ್ ಶ್ವಾನದಳದಿಂದ ಶೋಧ ಕಾರ್ಯ ನಡೆದಿದೆ.
ನಿನ್ನೆ ತಡರಾತ್ರಿ ಹತ್ಯೆಯಾಗಿರುವ ಮಾಹಿತಿ ಲಭ್ಯವಾಗಿದ್ದು, ಸ್ಥಳಕ್ಕೆ ಎಸ್ಪಿ ಟಿ. ಶ್ರೀಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.