ETV Bharat / state

ಲಿಂಗಾಯತ ಜಾತಿ ಪ್ರಮಾಣಪತ್ರದಲ್ಲಿನ ದೋಷ ಸರಿಪಡಿಸಲು ರಾಷ್ಟ್ರೀಯ ಬಸವ ದಳ ಒತ್ತಾಯ - National Basava dala protest

ಲಿಂಗಾಯತ ಸಮುದಾಯಕ್ಕೆ ಜಾತಿ ಪ್ರಮಾಣಪತ್ರ ನೀಡುವಲ್ಲಿ ಲೋಪದೋಷ ಉಂಟಾಗುತ್ತಿದೆ. ಮೂಲ ಜಾತಿ ಲಿಂಗಾಯತ ಎಂದು ನಮೂದಿಸಿದರು ಕೂಡ ಪ್ರಸ್ತುತ ಸಂದರ್ಭದಲ್ಲಿ ವೀರಶೈವ-ಲಿಂಗಾಯತ ಎಂದು ಜಾತಿ ಪ್ರಮಾಣಪತ್ರ ನೀಡಲಾಗುತ್ತಿದೆ. ಇದನ್ನು ಸರಿಪಡಿಸುವಂತೆ ಒತ್ತಾಯಿಸಿ ರಾಷ್ಟ್ರೀಯ  ಬಸವ ದಳದ ಕಾರ್ಯಕರ್ತರು ಒತ್ತಾಯಿಸಿದರು.

Protest
Protest
author img

By

Published : Sep 23, 2020, 12:04 PM IST

ಬಸವಕಲ್ಯಾಣ: ಲಿಂಗಾಯತ ಸಮುದಾಯದವರಿಗೆ ಲಿಂಗಾಯತ ಜಾತಿ ಪ್ರಮಾಣಪತ್ರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರೀಯ ಬಸವ ದಳದ ಸ್ಥಳೀಯ ಕಾರ್ಯಕರ್ತರ ಶಾಖೆ ಒತ್ತಾಯಿಸಿದೆ.

ಇಲ್ಲಿಯ ಮಿನಿ ವಿಧಾನಸೌಧಕ್ಕೆ ತೆರಳಿದ ಸಂಘಟನೆಯ ಪದಾಧಿಕಾರಿಗಳು ಹಾಗೂ ಪ್ರಮುಖರ ನಿಯೋಗ ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ನವರಿಗೆ ಬರೆದ ಮನವಿ ಪತ್ರವನ್ನು ಉಪ ತಹಶೀಲ್ದಾರ್ ಶಿವಾನಂದ ಮೇತ್ರೆ ಅವರಿಗೆ ಸಲ್ಲಿಸಿ, ಬೇಡಿಕೆ ಈಡೇರಿಕೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಲಿಂಗಾಯತ ಸಮುದಾಯಕ್ಕೆ ಜಾತಿ ಪ್ರಮಾಣಪತ್ರ ನೀಡುವಲ್ಲಿ ಲೋಪದೋಷಗಳು ಉಂಟಾಗುತ್ತಿದೆ. ಮೂಲ ಜಾತಿ ಲಿಂಗಾಯತ ಎಂದು ನಮೂದಿಸಿದರು ಕೂಡ ಪ್ರಸ್ತುತ ಸಂದರ್ಭದಲ್ಲಿ ವೀರಶೈವ-ಲಿಂಗಾಯತ ಎಂದು ಜಾತಿ ಪ್ರಮಾಣಪತ್ರ ನೀಡಲಾಗುತ್ತಿದೆ. ಇದರಿಂದಾಗಿ ಲಿಂಗಾಯತ ಸಮಾಜದ ಜನರ ಭಾವನೆಗಳಿಗೆ ಧಕ್ಕೆಯಾಗುತ್ತಿದೆ ಎಂದು ಮನವಿ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ.

2002ರಿಂದ ಲಿಂ. ಮಾತೆ ಮಹಾದೇವಿಯವರ ನೇತೃತ್ವದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಿದರು ಕೂಡ ಇದುವರೆಗೆ ಸರ್ಕಾರ ಗಮನ ಹರಿಸಿಲ್ಲ. ಈ ಬಗ್ಗೆ ಧಾರವಾಡ ಹೈಕೋರ್ಟ್​ನಲ್ಲಿ ದಾವೆ ಹೂಡಲಾಗಿದ್ದು, ನ್ಯಾಯಲಯ ನಮ್ಮ ಪರ ತೀರ್ಪು ನೀಡಿ, ಕ್ರಮಕ್ಕಾಗಿ ಸೂಚಿಸಿ ಸರ್ಕಾರಕ್ಕೆ ಆದೇಶ ಹೊರಡಿಸಿದೆ. ಇದುವರೆಗೆ ಸರ್ಕಾರ ಕ್ರಮ ತೆಗೆದುಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.