ಬೀದರ್: ಪೌರತ್ವ ತಿದ್ದುಪಡಿ ಕಾಯ್ದೆ ತಿದ್ದುಪಡಿಗೆ ವಿರೋಧಿಸಿ ರಾಜ್ಯಾದ್ಯಂತ ಕರೆ ನೀಡಿರುವ ಪ್ರತಿಭಟನೆಗೆ ಜಿಲ್ಲೆಯಾದ್ಯಂತ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಪ್ರತಿಭಟನೆಯಾಗಲಿ ಹಾಗೂ ಮನವಿ ಪತ್ರ ನೀಡುವುದಾಗಲಿ ನಡದೇ ಇಲ್ಲ.
ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಹೆಚ್.ಆರ್. ಮಹಾದೇವ ಆದೇಶ ನೀಡಿದ್ದು, ನಗರದಲ್ಲಿ ಜನಜೀವನ ಯಥಾವತ್ತಾಗಿ ನಡೆಯುತ್ತಿದೆ. ಸಾರ್ವಜನಿಕ ಸಂಚಾರ, ಸಾರಿಗೆ ಬಸ್ಗಳ ಓಡಾಟ, ವ್ಯಾಪಾರ ವಹಿವಾಟು ಎಂದಿನಂತೆ ನಡೆಯುತ್ತಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ತಾಲೂಕು ಕೇಂದ್ರಗಳಲ್ಲಿ ಪೊಲೀಸ್ ಬಂದೋಬಸ್ತ್ ಅಳವಡಿಸಲಾಗಿದೆ.