ಬೀದರ್: ಲಾಕ್ಡೌನ್ ನಡುವೆ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಸಾಗಿಸುತ್ತಿದ್ದ ಲಾರಿಯೊಂದನ್ನು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಜಿಲ್ಲೆಯ ಮನ್ನಳ್ಳಿ ಗ್ರಾಮದ ಬಳಿ ಅಕ್ರಮವಾಗಿ 70 ಕ್ವಿಂಟಲ್ ಪಡಿತರ ಅಕ್ಕಿ ಸಾಗಾಟ ಮಾಡಲಾಗ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಕಳೆದ ನಾಲ್ಕು ದಿನಗಳ ಹಿಂದೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿ 28 ಟನ್ ಅಕ್ಕಿ ಹಾಗೂ 7.5 ಟನ್ ಗೋಧಿ ಜಪ್ತಿ ಮಾಡಿದ್ದರು.