ETV Bharat / state

ಡೆಂಗ್ಯೂ ನಿಯಂತ್ರಣಕ್ಕೆ ಮುಂದಾದ ಅಧಿಕಾರಿಗಳು: ಮಿನಿ ವಿಧಾನಸೌಧದಲ್ಲಿ ಸಭೆ - ತಾಲೂಕು ಪಂಚಾಯಿತಿ ಇಒ ಮಡಿವಾಳಪ್ಪ

ಬೀದರ್​ ನಗರ ಸೇರಿದಂತೆ ತಾಲೂಕಿನ ವಿವಿಧೆಡೆ ಡೆಂಗ್ಯೂ ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಇಲ್ಲಿಯ ಮಿನಿ ವಿಧಾನಸೌಧದಲ್ಲಿ ತಹಶಿಲ್ದಾರ್​​ ಸಾವಿತ್ರಿ ಸಲಗರ್ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಕಾಯಿಲೆ ನಿಯಂತ್ರಣಕ್ಕೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಡೆಂಘೀ ನಿಯಂತ್ರಣಕ್ಕೆ ಮುಂದಾದ ಅಧಿಕಾರಿಗಳು
author img

By

Published : Oct 17, 2019, 6:03 AM IST

ಬಸವಕಲ್ಯಾಣ: ಮಾರಕ ಡೆಂಗ್ಯೂ ಜ್ವರ ಉಲ್ಭಣಗೊಂಡ ಬಗ್ಗೆ ಈಟಿವಿ ಭಾರತದಲ್ಲಿ ಪ್ರಸಾರಗೊಂಡ ಸರಣಿ ವರದಿಗಳ ಹಿನ್ನೆಲೆಯಲ್ಲಿ ಎಚ್ಚೆತ್ತ ತಾಲೂಕಾಡಳಿತ ರೋಗ ನಿಯಂತ್ರಣಕ್ಕೆ ಮುಂದಾಗಿದೆ.

ನಗರ ಸೇರಿದಂತೆ ತಾಲೂಕಿನ ವಿವಿಧೆಡೆ ಡೆಂಗ್ಯೂ ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಇಲ್ಲಿಯ ಮಿನಿ ವಿಧಾನಸೌಧದಲ್ಲಿ ತಹಶಿಲ್ದಾರ್​​ ಸಾವಿತ್ರಿ ಸಲಗರ್ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರ ಸಭೆ ನಡೆಸಿದರು. ಶಂಕಿತ ಡೆಂಗ್ಯೂ ಕಾಯಿಲೆ ನಿಯಂತ್ರಣಕ್ಕೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಮಾತನಾಡಿದ ತಹಶಿಲ್ದಾರ್​, ನಗರ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣಗಳು ಕಂಡು ಬರುತ್ತಿವೆ. ನಗರದಲ್ಲಿ ಇದರ ಪ್ರಮಾಣ ತೀವ್ರತೆಯಿಂದ ಕೂಡಿದೆ ಎನ್ನುವ ಬಗ್ಗೆ ಮಾಹಿತಿ ಇದ್ದು, ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಖಾಸಗಿ ಆಸ್ಪತ್ರೆಗೆ ಬರುವ ಜನರ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು. ಸಾಮಾನ್ಯವಾಗಿ ಕಂಡು ಬರುವ ಇತರ ಜ್ವರಗಳಿಗೆ ಡೆಂಗ್ಯೂ ಎಂದು ಹೇಳುವ ಮೂಲಕ ಜನರಲ್ಲಿ ಭಯ ಹುಟ್ಟಿಸಿ ಹಣ ಸುಲಿಗೆ ಮಾಡುವ ಕೆಲಸ ಮಾಡಬಾರದು ಎಂದು ಖಾಸಗಿ ವೈದ್ಯರಿಗೆ ಸೂಚನೆ ನೀಡಿದರು.

ಶಂಕಿತ ಡೆಂಗ್ಯೂ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಬೇಡ. ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮನೆ, ಮನೆಗೆ ತೆರಳಿ ಸ್ವಚ್ಛತೆ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು. ನಗರದ ಪ್ರತಿ ವಾರ್ಡ್​ಗಳಲ್ಲಿಯ ಚರಂಡಿ ಸ್ವಚ್ಛತೆಗೆ ಕ್ರಮ ಕೈಗೊಳ್ಳಬೇಕು ಎಂದು ನಗರ ಸಭೆ ಅಧಿಕಾರಿಗಳಿಗೆ ಸೂಚಿಸಿದರು.

ಡೆಂಘೀ ನಿಯಂತ್ರಣಕ್ಕೆ ಮುಂದಾದ ಅಧಿಕಾರಿಗಳು

ತಾಲೂಕು ಪಂಚಾಯಿತಿ ಇಒ ಮಡಿವಾಳಪ್ಪ ಪಿ,ಎಸ್. ಮಾತನಾಡಿ, ಸಾಮಾನ್ಯವಾಗಿ ಜ್ವರದಿಂದ ಬಳಲಿ ಆಸ್ಪತ್ರೆಗೆ ಬರುವ ಜನರಿಗೆ ಡೆಂಗ್ಯೂ ಜ್ವರ ಇದೆ ಎಂದು ಹೇಳಿ ಅವರಲ್ಲಿ ಭಯ ಹುಟ್ಟಿಸಿ ಹಣ ಸುಲಿಗೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಇಂಥ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿತ ಆಸ್ಪತ್ರೆ ವಿರುದ್ಧ ಸೂಕ್ತ ಕ್ರಮಕ್ಕಾಗಿ ಮೇಲಾಧಿಕಾರಿಗಳು ವರದಿ ಸಲ್ಲಿಸಲಾಗುವದು ಎಂದು ಎಚ್ಚರಿಸಿದರು.

ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕಾಗಿ ಆಡಳಿತದೊಂದಿಗೆ ಖಾಸಗಿ ಆಸ್ಪತ್ರೆಯವರು ಸಹಕರಿಸಬೇಕು. ನಿಮ್ಮ, ನಿಮ್ಮ ಆಸ್ಪತ್ರೆಗಳಲ್ಲಿ ಡೆಂಗ್ಯೂ ಪ್ರಕರಣ ಕಂಡು ಬಂದಲ್ಲಿ ತಕ್ಷಣ ತಾಲೂಕು ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಪ್ರತಿದಿನ ಮಧ್ಯಾಹ್ನ ಹಾಗೂ ಸಂಜೆ ತಪ್ಪದೆ ವರದಿ ಸಲ್ಲಿಸಬೇಕು. ಜ್ವರದಿಂದ ಬಳಲುತ್ತಿರುವ ಜನರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದರು.

ವೈದ್ಯರನ್ನು ನೋಡಲ್ ಅಧಿಕಾರಿಯಾಗಿ ನೇಮಕ:

ಪ್ರತಿ ವಾರ್ಡ್​ಗಳಿಗೆ ಒಬ್ಬರು ವೈದ್ಯರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದ್ದು, ಶಂಕಿತ ಡೆಂಗ್ಯೂ ಜ್ವರ ನಿಯಂತ್ರಣಕ್ಕಾಗಿ ಆಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆ ಹಾಗೂ ನರಸಭೆ ಸಿಬ್ಬಂದಿ, ನಗರಸಭೆ ಸದಸ್ಯರು ಸಂಬಂಧಿತ ಇಲಾಖೆ ಅಧಿಕಾರಿ, ಸಿಬ್ಬಂದಿಗಳ ತಂಡ ರಚಿಸಿ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ನಗರದ ಪ್ರತಿವಾರ್ಡ್​ಗಳಿಗೆ ಒಬ್ಬರಂತೆ ವೈದ್ಯರನ್ನು ನೋಡಲ್​​​ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗುವುದು. ಜ್ವರ ನಿಯಂತ್ರಣಕ್ಕೆ ಬರುವವರೆಗೆ ನಿಗಾವಹಿಸಲಾಗುವುದು ಎಂದು ತಾಪಂ ಇಒ ಮಡಿವಾಳಪ್ಪ ಪಿ.ಎಸ್. ಮಾಹಿತಿ ನೀಡಿದರು.

Intro:(ಗಮನಕ್ಕೆ: ನಮ್ಮ ಸುದ್ದಿಗಳನ್ನು ಬಸವಕಲ್ಯಾಣ ಡೇಟ್ ಲೈನ್ ಮೇಲೆ ಹಾಕಿಕೊಳ್ಳಿ. ಸರ್,)

2 ವಿಡಿಯೊಗಳನ್ನು ಕಳಿಸಲಾಗಿದೆ

ಈ ಟಿವಿ ಭಾರತ ವರದಿ ಫಲಶೃತಿ
ಎಚ್ಚೆÃತ್ತ ಆಡಳಿತ
ಡೆಂಘೀ ನಿಯಂತ್ರಣಕ್ಕೆ ಮುಂದಾದ ಅಧಿಕಾರಿಗಳು

ಬಸವಕಲ್ಯಾಣ: ಮಾರಕ ಡೆಂಘೀ ಜ್ವರ ಉಲ್ಭಣ ಹಿನ್ನೆಲೆಯಲ್ಲಿ ಈ ಟಿವಿ ಭಾರತದಲ್ಲಿ ಪ್ರಸಾರಗೊಂಡ ಸರಣಿ ವರದಿಗಳ ಹಿನ್ನೆಲೆಯಲ್ಲಿ ಎಚ್ಚೆÃತ್ತ ತಾಲೂಕು ಆಡಳಿತ ಮಾರಕ ಡೆಂಘೀ ಜ್ವರ ನಿಯಂತ್ರಣಕ್ಕೆ ಮುಂದಾಗಿದೆ.
ನಗರ ಸೇರಿದಂತೆ ತಾಲೂಕಿನ ವಿವಿಧಡೆ ಕಾಣಿಸಿಕೊಂಡ ಉಲ್ಭಣಗೊಂಡ ಶಂಕಿತ ಡೆಂಘೀ ಜ್ವರದ ಹಿನ್ನೆಲೆಯಲ್ಲಿ ಇಲ್ಲಿಯ ಮಿನಿ ವಿಧಾನ ಸೌಧದಲ್ಲಿ ತಹಶೀಲ್ದಾರ ಸಾವಿತ್ರಿ ಸಲಗರ್ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರ ಸಭೆ ನಡೆಸಿ, ಶಂಕಿತ ಡೆಂಘೀ ಕಾಯಿಲೆ ನಿಯಂತ್ರಣಕ್ಕೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ತಹಶೀಲ್ದಾರ, ನಗರ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶಂಕಿತ ಡೆಂಘೀ ಪ್ರಕರಣಗಳು ಕಂಡು ಬರುತ್ತಿವೆ. ನಗರದಲ್ಲಿ ಇದರ ಪ್ರಮಾಣ ತೀವ್ರತೆಯಿಂದ ಕೂಡಿದೆ ಎನ್ನುವ ಬಗ್ಗೆ ಮಾಹಿತಿ ಇದ್ದು, ಡೆಂಘೀ ಜ್ವರಕ್ಕೆ ತುತ್ತಾಗಿ ಖಾಸಗಿ ಆಸ್ಪತ್ರೆಗೆ ಬರುವ ಜನರ ಬಗ್ಗೆ ನಿರ್ಲಕ್ಷ ವಹಿಸಬಾರದು. ಸಾಮಾನ್ಯವಾಗಿ ಕಂಡು ಬರುವ ಇತರ ಜ್ವರಗಳಿಗೆ ಡೆಂಘೀ ಎಂದು ಹೇಳುವ ಮೂಲಕ ಜನರಲ್ಲಿ ಭಯ ಹುಟ್ಟಿಸಿ ಹಣ ಸುಲಿಗೆ ಮಾಡುವ ಕೆಲಸ ಮಾಡಬಾರದು ಎಂದು ಖಾಸಗಿ ವೈದ್ಯರಿಗೆ ಸೂಚನೆ ನೀಡಿದರು.
ಶಂಕಿತ ಡೆಂಘೀ ಬಗ್ಗೆ ನಿರ್ಲಕ್ಷ ವಹಿಸುವದು ಬೇಡ. ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮನೆ, ಮನೆಗೆ ತೆರಳಿ ಸ್ವಚ್ಚತೆ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು. ನಗರದ ಪ್ರತಿ ವಾರ್ಡ್ಗಳಲ್ಲಿಯ ಚರಂಡಿ ಸ್ವಚ್ಚತೆಗೆ ಕ್ರಮ ಕೈಗೊಳ್ಳಬೇಕು ಎಂದು ನಗರ ಸಭೆ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕು ಪಂಚಾಯತ್ ಇಒ ಮಡಿವಾಳಪ್ಪ ಪಿ,ಎಸ್. ಮಾತನಾಡಿ, ಸಾಮಾನ್ಯವಾಗಿ ಜ್ವರದಿಂದ ಬಳಲಿ ಆಸ್ಪತ್ರೆಗೆ ಬರುವ ಜನರಿಗೆ ಡೆಂಘೀ ಜ್ವರ ಇದೆ ಎಂದು ಹೇಳಿ ಅವರಲ್ಲಿ ಭಯ ಹುಟ್ಟಿಸಿ ಹಣ ಸುಲಿಗೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಇಂಥ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿತ ಆಸ್ಪತ್ರೆ ವಿರುದ್ಧ ಸೂಕ್ತ ಕ್ರಮಕ್ಕಾಗಿ ಮೇಲಾಧಿಕಾರಿಗಳು ವರದಿ ಸಲ್ಲಿಸಲಾಗುವದು ಎಂದು ಎಚ್ಚರಿಸಿದರು.
ಡೆಂಘೀ ಪ್ರಕರಣಗಳ ನಿಯಂತ್ರಣಕ್ಕಾಗಿ ಆಡಳಿತದೊಂದಿಗೆ ಖಾಸಗಿ ಆಸ್ಪತ್ರೆಯವರು ಸಹಕರಿಸಬೇಕು. ನಿಮ್ಮ, ನಿಮ್ಮ ಆಸ್ಪತ್ರೆಗಳಲ್ಲಿ ಡೆಂಘೀ ಪ್ರಕರಣ ಕಂಡು ಬಂದಲ್ಲಿ ತಕ್ಷಣ ತಾಲೂಕು ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಪ್ರತಿದಿನ ಮಧ್ಯಾಹ್ನ ಹಾಗೂ ಸಂಜೆ ತಪ್ಪದೆ ವರದಿ ಸಲ್ಲಿಸಬೇಕು. ಜ್ವರದಿಂದ ಬಳಲುತ್ತಿರುವ ಜನರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಅವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಹೈಯರ ಸೆಂಟರ್‌ಗಳಿಗೆ ಕಳಿಸಬೇಕು, ಮುಂದೆ ಯಾವ ಆಸ್ಪತ್ರೆಗೆ ಕಳಿಸಲಾಗಿದೆ ಎನ್ನುವ ಬಗ್ಗೆ ಆರೋಗ್ಯ ಇಲಾಖೆಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಶರಣಪ್ಪ ಮುಡಬಿ, ಸರ್ಕಾರಿ ಆಸ್ಪತ್ರೆ ಮುಖ್ಯವೈದ್ಯಾಧಿಕಾರಿ ಡಾ. ಅಪರ್ಣಾ ಮಹಾನಂದ, ಖಾಸಗಿ ಆಸ್ಪತ್ರೆ ತಜ್ಞ ವೈದ್ಯರಾದ ಡಾ. ಜಿ.ಎಸ್.ಭುರಾಳೆ, ಡಾ.ವಿ.ಎಸ್.ಮಠಪತಿ, ಡಾ. ಸೂರ್ಯವಂಶಿ, ಡಾ.ಸದಾನಂದ ಪಾಟೀಲ, ಡಾ.ತಾಜೋದ್ದಿನ್, ಡಾ. ಜಾಕಿಯೋದ್ದಿನ್, ಡಾ. ಜ್ಯೊÃತಿ ಹಂಚಾಟೆ, ಡಾ.ಕುದುರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳ ವೈದ್ಯರು, ಆರೋಗ್ಯ ಇಲಾಖೆ ಹಾಗೂ ನಗರ ಸಭೆ ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಪ್ರತಿ ವಾರ್ಡ್ಗಳಿಗೆ ಒಬ್ಬರು
ವೈದ್ಯರನ್ನು ನೋಡಲ್ ಅಧಿಕಾರಿಯಾಗಿ ನೇಮಕ
ಶಂಕಿತ ಡೆಂಘೀ ಜ್ವರ ನಿಯಂತ್ರಣಕ್ಕಾಗಿ ಆಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆ ಹಾಗೂ ನರಸಭೆ ಸಿಬ್ಬಂದಿಗಳು, ನಗರಸಭೆ ಸದಸ್ಯರು ಸಂಬಂಧಿತ ಇಲಾಖೆ ಅಧಿಕಾರಿ, ಸಿಬ್ಬಂದಿಗಳ ತಂಡ ರಚಿಸಿ ಜನರಲ್ಲಿ ಜಾಗೃತಿ ಮೂಡಿಸಲಾಗುವದು. ನಗರದ ಪ್ರತಿವಾರ್ಡಗಳಿಗೆ ಒಬ್ಬರಂತೆ ವೈದ್ಯರನ್ನು ನೋಡಲ ಅಧಿಕಾರಿಗಳನ್ನಾಗಿ ÉÃಮಕ ಮಾಡಲಾಗುವದು. ಜ್ವರ ನಿಯಂತ್ರಣಕ್ಕೆ ಬರುವವರೆಗೆ ನಿಗಾವಹಿಸಲಾಗುವದು ಎಂದು ತಾಪಂ ಇಒ ಮಡಿವಾಳಪ್ಪ ಪಿ.ಎಸ್. ಮಾಹಿತಿ ಈ ಟಿವಿ ಭಾರತಕ್ಕೆ ಮಾಹಿತಿ ನೀಡಿದರು.

ಬೈಟ್ ೧
ಮಡಿವಾಳಪ್ಪ ಪಿ.ಎಸ್.
ತಾಪಂ ಇಒ ಬಸವಕಲ್ಯಾಣ
(ಗುಲಾಬಿ ಬಣ್ಣದ ಶರ್ಟ್ ಧರಿಸಿದವರು)

ವರದಿ
ಉದಯಕುಮಾರ ಮುಳೆ
ಈ ಟಿವಿ ಭಾರತ
ಬಸವಕಲ್ಯಾಣ

(ಗಮನಕ್ಕೆ: ನಮ್ಮ ಸುದ್ದಿಗಳನ್ನು ಬಸವಕಲ್ಯಾಣ ಡೇಟ್ ಲೈನ್ ಮೇಲೆ ಹಾಕಿಕೊಳ್ಳಿ. ಸರ್,)

ಚಿತ್ರಗಳು ಕಳಿಸಲಾಗಿದೆ.

ಸಾಲಬಾಧೆಯಿಂದ ಬೇಸತ್ತ
ವೃದ್ದ ರೈತ ನೇಣಿಗೆ ಶರಣು

ಬಸವಕಲ್ಯಾಣ: ಸಾಲ ಬಾಧೆಯಿಂದ ಬೇಸತ್ತ ವೃದ್ದ ರೈತನೊಬ್ಬ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮುಡಬಿವಾಡಿಯಲ್ಲಿ ಮಂಗಳವಾರ ನಡೆದಿದೆ.
ಗ್ರಾಮದ ಅಂಬಣ್ಣ ಹಣಮಂತಪ್ಪ ಗಡಮಿದೆ (೬೫) ಆತ್ಮಹತ್ಯೆ ಮಾಡಿಕೊಂಡ ರೈತ.
ಕೃಷಿ ಕಾಯಕ್ಕೆಂದು ಮಧ್ಯಾಹ್ನ ೨ರ ಸುಮಾರಿಗೆ ತನ್ನ ಜಮಿನಿಗೆ ತೆರಳಿದ ರೈತ ಅಂಬಣ್ಣ, ಸಂಜೆ ೫ರ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಡಬಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಖಾಸಗಿ ವಲಯದಲ್ಲಿ ೨.೫೦ ಲಕ್ಷಕ್ಕೂ ಅಧಿಕ ಸಾಲ ಹೊಂದಿದ ಈತ ಸಾಲ ತೀರಿಸಲು ಸಾಧ್ಯವಾಗದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಮುಡಬಿ ಠಾಣೆ ಪೊಲೀಸರ ತಂಡ ತನಿಖೆ ಮುಂದುವರೆಸಿದ್ದಾರೆ. ಪಿಎಸ್ಐ ವಸಿಮ್ ಪಟೇಲ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದ್ದಾರೆ.

ವರದಿ
ಉದಯಕುಮಾರ ಮುಳೆ
ಈ ಟಿವಿ ಭಾರತ
ಬಸವಕಲ್ಯಾಣ

Body:UDAYAKUMAR MULEConclusion:BASAVAKALYAN
ETV Bharat Logo

Copyright © 2025 Ushodaya Enterprises Pvt. Ltd., All Rights Reserved.