ಬೀದರ್: ವಿದೇಶದಿಂದ ಒನ್ ಇಂಡಿಯಾ ವಿಮಾನದ ಮೂಲಕ ಬೆಂಗಳೂರಿಗೆ ಬಂದು ಕ್ವಾರಂಟೈನ್ನಲ್ಲಿದ್ದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪೂರ ಗ್ರಾಮದ 40 ವರ್ಷ ವಯಸ್ಸಿನ ವ್ಯಕ್ತಿ ಮೇ 20ರಂದು ಮಸ್ಕತ್ನಿಂದ ವಾಪಸಾಗಿದ್ದ. ಈ ವೇಳೆ ಬೆಂಗಳೂರಿನಲ್ಲೇ ಕ್ವಾರಂಟೈನ್ ಮಾಡಲಾಗಿತ್ತು. ನಂತರ ಗಂಟಲು ದ್ರವ ಮಾದರಿ ಪರಿಕ್ಷೆಗೆ ಒಳಪಡಿಸಿದಾಗ ಕೊರೊನಾ ಸೋಂಕು ಪತ್ತೆಯಾಗಿದ್ದು, ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.