ಬೀದರ್: ದೆಹಲಿಯಿಂದ ಬೆಂಗಳೂರಿಗೆ ಬಂದು ಬೆಂಗಳೂರಿನಿಂದ ಬೀದರ್ವರೆಗೆ ಸಾರಿಗೆ ಸಂಸ್ಥೆ ಬಸ್ನಲ್ಲಿ ಪ್ರಯಾಣಿಸಿದ ವ್ಯಕ್ತಿಯಲ್ಲಿ ಸೋಂಕು ದೃಢವಾಗಿದ್ದು, ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚವುದು ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.
ಪಿ-4864, 28 ವಯಸ್ಸಿನ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ. ಈತ ಕಳೆದ ವಾರ ದೆಹಲಿಯಿಂದ ಬೆಂಗಳೂರಿಗೆ ಪ್ರಯಾಣ ಮಾಡಿದ್ದು, ಬೆಂಗಳೂರಿನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಆದರೆ 5 ದಿನಗಳ ಕ್ವಾರಂಟೈನ್ ಮುಗಿಸಿದ ನಂತರ ಈತನನ್ನು ಮನೆಗೆ ಹೋಗುವಂತೆ ಹೇಳಲಾಗಿದೆ.
ಈ ಹಿನ್ನೆಲೆಯಲ್ಲಿ ಸಾರಿಗೆ ಬಸ್ನಲ್ಲಿ ಕಳೆದ ಮೂರು ದಿನಗಳ ಹಿಂದೆ ಬೆಂಗಳೂರಿನಿಂದ ಬೀದರ್ಗೆ ಪ್ರಯಾಣ ಮಾಡಿದ್ದಾನೆ. ಬೀದರ್ ಬಂದ ಮೇಲೆ ಸ್ವಯಂ ಪ್ರೇರಿತವಾಗಿ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇಂದು ಬಂದ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಧೃಢವಾಗಿದೆ.
ಈ ಸೋಂಕಿತ ವ್ಯಕ್ತಿಯ ಟ್ರಾವಲಿಂಗ್ ಹಿಸ್ಟರಿ ತುಂಬಾನೆ ವಿಚಿತ್ರವಾಗಿದಕ್ಕೆ ಪ್ರಾಥಮಿಕ ಹಾಗೂ ಎರಡನೇ ಹಂತದ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚಬೇಕಾಗಿದೆ.
ಬೀದರ್ನಲ್ಲಿಂದು 33 ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಈ ಮೂಲಕ 74 ಜನರು ಗುಣಮುಖರಾದಂತಾಗಿದ್ದು, ಸೋಂಕಿತರ ಸಂಖ್ಯೆ 215ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ ಸೋಂಕಿನಿಂದ 6 ಜನರು ಸಾವನಪ್ಪಿದ್ದು, 135 ಜನರಿಗೆ ಚಿಕಿತ್ಸೆ ಮುಂದುವರಿದಿದೆ.