ಬೀದರ್: ಪೌರತ್ವ ಕಾಯಿದೆ ತಿದ್ದುಪಡಿ ವಿರೋಧಿಸಿ ವಿವಿಧ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗೆ ಶಾಂತಿಯುತವಾಗಿ ಬೆಂಬಲಿಸುವಂತೆ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ರಹೀಂಖಾನ್ ಮನವಿ ಮಾಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂವಿಧಾನ ಉಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ಕಾಯಿದೆಯನ್ನ ವಾಪಸ್ ಪಡೆಯುವಂತೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಗೆ ಸಾಥ್ ನೀಡಿ ಎಂದರು.
ಮೆರವಣಿಗೆ, ಪ್ರತಿಭಟನೆಗೆ ಇಲ್ಲದ ಅವಕಾಶ:
ಇದೀಗ ಜಿಲ್ಲಾಡಳಿತ ಎಚ್ಚೆತ್ತುಕೊಂಡು ವಿವಿಧ ಸಂಘಟನೆಗಳ ಮುಖಂಡರ ಸಭೆ ನಡೆಸಿದ್ದು, ಸೋಮವಾರ ಬಂದ್ ಗೆ ಅವಕಾಶ ಇಲ್ಲ. ಯಾವುದೇ ರೀತಿಯ ಪ್ರತಿಭಟನಾ ಮೆರವಣಿಗೆಯಾಗಲಿ, ಬೈಕ್ ರ್ಯಾಲಿಗಲಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವ ಯಾವುದೇ ಚಟುವಟಿಕೆ ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.