ETV Bharat / state

ಬಿಸಿಯೂಟ ನೌಕರರ ವಿರುದ್ಧ ಹೂಡಿರುವ ಪ್ರಕರಣ ಕೈಬಿಡುವಂತೆ ಮನವಿ ಪತ್ರ ಸಲ್ಲಿಕೆ

author img

By

Published : Feb 8, 2020, 12:56 PM IST

ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ನೌಕರರ ವಿರುದ್ಧ ಹೂಡಿರುವ ಎಲ್ಲಾ ಪ್ರಕರಣಗಳನ್ನು ಕೈಬಿಡುವ ಮೂಲಕ, ಬಿಸಿಯೂಟ ನೌಕರರ ಸಂಘದ ಬೇಡಿಕೆ ಈಡೇರಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಬಿಸಿಯೂಟ ನೌಕರರ ಸಂಘದ ತಾಲೂಕು ಘಟಕ ಒತ್ತಾಯಿಸಿದೆ.

midday-meal-employees
midday-meal-employees

ಬಸವಕಲ್ಯಾಣ: ಅಕ್ಷರ ದಾಸೋಹ ಯೋಜನೆಯಡಿ ಸರ್ಕಾರಿ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ನೌಕರರ ಬೇಡಿಕೆ ಈಡೇರಿಕೆ ಸಂಬಂಧ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ಹೋರಾಟಗಾರರ ಮೇಲೆ ಹೂಡಿರುವ ಪ್ರಕರಣಗಳನ್ನು ತಕ್ಷಣ ಕೈಬಿಡಬೇಕು ಎಂದು ಬಿಸಿಯೂಟ ನೌಕರರ ಸಂಘದ ತಾಲೂಕು ಘಟಕ ಒತ್ತಾಯಿಸಿದೆ.

ಮನವಿ ಪತ್ರ ಸಲ್ಲಿಕೆ

ಸಂಘದ ಅಧ್ಯಕ್ಷೆ ರಂಜನಾ ಮಂಠಾಳಕರ್ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧಕ್ಕೆ ತೆರಳಿದ ಸಂಘದ ಪದಾಧಿಕಾರಿಗಳು, ಉಪ ತಹಶೀಲ್ದಾರ ಶಿವಾನಂದ ಮೇತ್ರೆ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಪ್ರತಿಭಟನೆ ನಡೆಸಿದ ನೌಕರರ ವಿರುದ್ಧ ಹೂಡಿರುವ ಎಲ್ಲಾ ಪ್ರಕರಣಗಳನ್ನು ಕೈಬಿಡುವ ಮೂಲಕ, ಬಿಸಿಯೂಟ ನೌಕರರ ಸಂಘದ ಬೇಡಿಕೆ ಈಡೇರಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಬಿಸಿಯೂಟ ನೌಕರರಿಗೆ ಕನಿಷ್ಠ 6 ಸಾವಿರ ರೂ. ವೇತನ ಹೆಚ್ಚಳ ಮಾಡಬೇಕು. ಎಲ್.ಐ.ಸಿ, ಆಧಾರಿತ ನಿವೃತ್ತ ವೇತನ ಜಾರಿಗೊಳಿಸಬೇಕು, ಬಿಸಿಯೂಟ ನೌಕರರನ್ನು ಡಿ ಗ್ರೂಪ್ ನೌಕರರೆಂದು ಪರಿಗಣಿಸಬೇಕು ಎನ್ನುವ ಪ್ರಮುಖ ಬೇಡಿಕೆಗಳು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.