ETV Bharat / state

ವೇಶ್ಯಾವಾಟಿಕೆ ನಡೆಸುತಿದ್ದ ಲಾಡ್ಜ್ ಮೇಲೆ ಪೊಲೀಸ್ ದಾಳಿ: ಬಾಂಗ್ಲಾ ಯುವತಿಯ ರಕ್ಷಣೆ - ಬಸವಕಲ್ಯಾಣ ವೇಶ್ಯಾವಾಟಿಕೆ ಸುದ್ದಿ

ಬಾಂಗ್ಲಾದೇಶದ ಹುಡುಗಿಯೊಬ್ಬಳನ್ನು ಕರೆ ತಂದು ವೇಶ್ಯಾವಾಟಿಕೆ ನಡೆಸುತಿದ್ದ ಲಾಡ್ಜ್​ವೊಂದರ ಮೇಲೆ ಪೊಲೀಸರು ದಾಳಿ ನಡೆಸಿ, ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

prostitution
ವೇಶ್ಯಾವಾಟಿಕೆ
author img

By

Published : Jul 21, 2021, 10:45 PM IST

ಬಸವಕಲ್ಯಾಣ: ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 65ರ ಲಾಡ್ಜ್​ವೊಂದರಲ್ಲಿ ಬಾಂಗ್ಲಾದೇಶದ ಹುಡುಗಿಯೊಬ್ಬಳನ್ನು ಕರೆ ತಂದು ವೇಶ್ಯಾವಾಟಿಕೆ ನಡೆಸುತಿದ್ದ ವಿಷಯ ತಿಳಿದು ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು 27 ವರ್ಷದ ಯುವತಿಯನ್ನು ರಕ್ಷಣೆ ಮಾಡಿದ್ದಾರೆ.

prostitution-lodge
ವೇಶ್ಯಾವಾಟಿಕೆ ನಡೆಸುತಿದ್ದ ಲಾಡ್ಜ್

ಹುಮನಾಬಾದ್​ ಡಿವೈಎಸ್ಪಿ ಸೋಮಲಿಂಗ ಕುಂಬಾರ ನೇತೃತ್ವದಲ್ಲಿ ಸಿಪಿಐ ರಘುವೀರಸಿಂಗ್ ಠಾಕೂರ ನೇತೃತ್ವದ ಪೊಲೀಸ್ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಹುಮನಾಬಾದ್​ ತಾಲೂಕಿನ ಶಿವಕುಮಾರ ಪೂಜಾರಿ ಹಾಗೂ ಲಾಡ್ಜ್ ಮಾಲೀಕ ಸೇರಿ ಇಬ್ಬರು ಆರೋಪಿಗಳ ವಿರುದ್ಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.

ದಾಳಿ ವೇಳೆ ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಜಾಲ ಬೀಸಿದ್ದಾರೆ. ದಾಳಿ ತಂಡದಲ್ಲಿ ಗ್ರಾಮೀಣ ಠಾಣೆ ಪಿಎಸ್‌ಐ ಕಿರಣ್​ಕುಮಾರ ಹಾಗೂ ಮಂಠಾಳ ಠಾಣೆ ಪಿಎಸ್‌ಐ ಜಯಶ್ರೀ ಹೊಡಲ್ ಸೇರಿದಂತೆ ಸಿಬ್ಬಂದಿ ಇದ್ದರು.

ಇದನ್ನೂ ಓದಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ: ಸಂಪುಟ ಸಹೋದ್ಯೋಗಿಗಳಲ್ಲಿ ಆತಂಕ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.