ಬೀದರ್: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಸಿದ ಘಟನೆ ನಗರದ ಅಂಬೇಡ್ಕರ್ ವೃತದಲ್ಲಿ ನಡೆದಿದೆ.
ಜಿಲ್ಲೆಯ ಔರಾದ್ ತಾಲೂಕಿನ ವಲ್ಲೆಪೂರ್ ನಿವಾಸಿ ಪ್ರಕಾಶ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಕೌಟುಂಬಿಕ ಕಹಲದಿಂದ ಮನನೊಂದ ಪ್ರಕಾಶ್, ಅಂಬೇಡ್ಕರ್ ವೃತ್ತದಲ್ಲಿ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಇದನ್ನು ಗಮನಿಸಿದ ಪೊಲೀಸರು ಓಡಿ ಬಂದು ವ್ಯಕ್ತಿಯನ್ನು ರಕ್ಷಿಸಿದ್ದರು. ಬಳಿಕ ಆತಯನ್ನು ಪೊಲೀಸರು ಮಾರ್ಕೆಟ್ ಠಾಣೆಗೆ ಕರೆದುಕೊಂಡು ಹೋದರು.
ಇದನ್ನೂ ಓದಿ: ರಷ್ಯಾ - ಉಕ್ರೇನ್ ಸಂಘರ್ಷ: ಉಕ್ರೇನ್ನಲ್ಲಿ 198 ನಾಗರಿಕರು ಸಾವು, ಸಾವಿರಕ್ಕೂ ಅಧಿಕ ಜನರಿಗೆ ಗಾಯ