ETV Bharat / state

ಹಾವೇರಿ, ಬೆಳಗಾವಿಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಮದ್ಯ, ಲಕ್ಷಗಟ್ಟಲೆ ಹಣ ವಶ

author img

By

Published : Apr 11, 2023, 8:00 AM IST

Updated : Apr 11, 2023, 8:15 AM IST

ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮದ್ಯ ಮತ್ತು ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಹಣ ವಶ
ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಹಣ ವಶ

ಹಾವೇರಿ: ಸೂಕ್ತದಾಖಲೆ ಇಲ್ಲದೆ ಸಾಗಿಸುತ್ತಿದ್ದ 40 ಲಕ್ಷ ರೂ. ಹಣವನ್ನ ಹಾವೇರಿ‌ ಪೊಲೀಸರು‌ ವಶಪಡಿಸಿಕೊಂಡ ಘಟನೆ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಚೆಕ್​ಪೋಸ್ಟ್ ಬಳಿ ನಡೆದಿದೆ. ಟೆಂಪೋ ಟ್ರಾವೆಲರ್​ನಲ್ಲಿ ಹಣ ಸಾಗಿಸುತ್ತಿದ್ದ ವೇಳೆ ಚೆಕ್​​ಪೋಸ್ಟ್ ಸಿಬ್ಬಂದಿ ತಪಾಸಣೆ ನಡೆಸಿದಾಗ ಈ ಹಣ ಪತ್ತೆಯಾಗಿದೆ.

ಹಣ ಸಾಗಿಸುತ್ತಿದ್ದ ಹೆಚ್​ಡಿಎಫ್​ಸಿ‌ ಬ್ಯಾಂಕನ ಕ್ಯಾಶ್ ಮ್ಯಾನೇಜಮೆಂಟ ಶಿವಯೋಗಿ ಮುದಿಗೌಡ್ರ, ಹೆಚ್​ಡಿಎಫ್​ಸಿ ಕ್ಯಾಶ್ ಮ್ಯಾನೇಜಮೆಂಟ್ ಮಲ್ಲಪ್ಪ ಮಹಮೀರಬಗೋಡ್ರ, ಗನ್ ಮ್ಯಾನ್ ಚಂದ್ರಪ್ಪ ದೇವಿಹೊಸೂರು. ಟೆಂಪೋ ಚಾಲಕ ಮಹೇಶ ಕೊಪ್ಪಳದ ಎಂಬುವವರನ್ನ ಪೋಲೀಸರು ವಶಕ್ಕೆ ಪಡೆದಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಎಸ್ ಎಸ್ ಟೀಮ್ 1 ವೀರಭದ್ರಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಹಣ ವಶಪಡಿಸಿಕೊಂಡಿದೆ.

ಬೆಳಗಾವಿ ಜಿಲ್ಲೆಯ ವಿವಿಧೆಡೆ ಅಕ್ರಮವಾಗಿ ಸಾಗಿಸುತ್ತಿದ್ದ ಸಾರಾಯಿ, ನಗದು ಜಪ್ತಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ಸೋಮವಾರ ದಾಳಿ ನಡೆಸಿದ ಪೊಲೀಸ್, ಅಬಕಾರಿ ಮತ್ತು ಎಫ್‍ಎಸ್‍ಟಿ ತಂಡದ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮದ್ಯ, ದಾಖಲೆ ಇಲ್ಲದೆ ಸಾಗಿಸುತ್ತಿದ್ದ ನಗದು ಸೇರಿ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ‌.

ಗೋಕಾಕ ವಲಯ ವ್ಯಾಪ್ತಿಯ ಕಪರಟ್ಟಿ ಕ್ರಾಸ್‍ನ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಒಟ್ಟು 3.50 ಲಕ್ಷ ರೂ. ಮೌಲ್ಯದ 656 ಲೀ. ಅಕ್ರಮ ಮದ್ಯವನ್ನು ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿದ್ದು, ಮನೆ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮತ್ತೊಂದೆಡೆ ಗೋಕಾಕ್ ತಾಲೂಕಿನ ಕುಲಗೋಡದ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 52 ಲೀ. ಮದ್ಯವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಸವದತ್ತಿ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 1.95 ಲಕ್ಷ ರೂ. ನಗದನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಹಣ ಸಾಗಿಸುತ್ತಿದ್ದ ವ್ಯಕ್ತಿಯನ್ನು ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಹಿರೇಬಾಗೇವಾಡಿ ಚೆಕ್ ಪೋಸ್ಟ್ ಬಳಿ‌ 14 ಕೆ.ಜಿ ಬೆಳ್ಳಿ ಜಪ್ತಿ

150 ಕೆಜಿ ಗಾಂಜಾ ವಶಪಡಿಸಿಕೊಂಡ ಪೊಲೀಸರು

ಬೀದರ್​: ಸೋಮವಾರ ನಗರದಲ್ಲಿ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಕಾನೂನು ಬಾಹಿರವಾಗಿ ಸಾಗಿಸುತ್ತಿದ್ದ ಸುಮಾರು 1 ಕೋಟಿ 40 ಲಕ್ಷ ಮೌಲ್ಯದ 150 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಔರಾದ ತಾಲೂಕಿನ ಏಕಂಬಾ ಚೆಕ್​ಪೋಸ್ಟ್ ನಲ್ಲಿ ತೆಲಂಗಾಣ ಹಾಗೂ ಬೀದರ್​ ಜಿಲ್ಲೆಯ ಇಬ್ಬರು ವ್ಯಕ್ತಿಗಳುನ ಕಾನೂನು ಬಾಹಿರವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಔರಾದ್​ ತಾಲೂಕಿನ ಸಿಪಿಐ ಮಲ್ಲಿಕಾರ್ಜುನ ಇಕ್ಕಳಕಿ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿ, ಅಕ್ರಮವಾಗಿ ಸಾಗಿಸುತ್ತಿದ್ದ 1 ಕೋಟಿ 30 ಲಕ್ಷ ಮೌಲ್ಯದ 130 ಕೆಜಿ ಗಾಂಜಾ, 2 ಲಕ್ಷ ನಗದು ಹಾಗು ಇದಕ್ಕೆ ಬಳಸಿದ ಬೊಲೆರೋ ವಾಹನ, ಎರಡು ಮೊಬೈಲ್ ಪೋನ್​ಗಳನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಐಜಿಪಿ ಅನುಪ್​ ಕುಮಾರ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ವಿಜಯಪುರ: ₹57 ಲಕ್ಷಕ್ಕೂ ಹೆಚ್ಚು ಮೌಲ್ಯದ ಮದ್ಯ ವಶಕ್ಕೆ

Last Updated : Apr 11, 2023, 8:15 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.