ಬಸವಕಲ್ಯಾಣ: ಭಾಲ್ಕಿ ಕ್ಷೇತ್ರದ ಮಾಜಿ ಶಾಸಕ ಪ್ರಕಾಶ ಖಂಡ್ರೆ ತಮ್ಮ ಬೆಂಬಲಿಗರೊಂದಿಗೆ ಮರಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಬಸವಕಲ್ಯಾಣ ಕ್ಷೇತ್ರದ ವಿಧಾನಸಭೆ ಉಪಚುನಾವಣೆ ನಿಮಿತ್ತ ನಗರದ ವರ್ಷ ಫಂಕ್ಷನ್ ಹಾಲ್ನಲ್ಲಿ ಆಯೋಜಿಸಿದ್ದ ಬಿಜೆಪಿ ಪಕ್ಷದ ಸಭೆಯಲ್ಲಿ ಪ್ರಕಾಶ ಖಂಡ್ರೆ ಹಾಗೂ ಅವರ ಬೆಂಬಲಿಗರು ಪಕ್ಷಕ್ಕೆ ಸೇರ್ಪಡೆಗೊಂಡರು.
ಬಿಜೆಪಿ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಪ್ರಕಾಶ್ ಖಂಡ್ರೆ ಅವರಿಗೆ ಬಿಜೆಪಿ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವಸತಿ ಸಚಿವ ವಿ.ಸೋಮಣ್ಣ ಸೇರಿದಂತೆ ಸಚಿವರು ಸಂಸದರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
1999 ಹಾಗೂ 2004ರಲ್ಲಿ ಬಿಜೆಪಿ ಪಕ್ಷದಿಂದ 2 ಅವಧಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಪ್ರಕಾಶ್ ಖಂಡ್ರೆ, 2018 ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಟಿಕೆಟ್ ಸಿಗದ ಹಿನ್ನೆಲೆ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡು ವಿಧಾನಸಭೆಗೆ ಸ್ಪರ್ಧೆ ಮಾಡಿ ಪರಾಭವಗೊಂಡಿದ್ದರು.