ಬಸವಕಲ್ಯಾಣ: ಮಾರಕ ಕೊರೊನಾ ಸೋಂಕಿನಿಂದ ಬಳಲಿ ಬೆಂಗಳೂರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕ ಬಿ.ನಾರಾಯಣರಾವ್ ಅವರು ಬೇಗ ಗುಣಮುಖರಾಗಿ ಮತ್ತೆ ಜನ ಸೇವೆಗೆ ಮರಳಲಿ ಎಂದು ಜೆಡಿಎಸ್ ಹಿರಿಯ ಮುಖಂಡ, ಮಾಜಿ ಸಚಿವ ಪಿ.ಜಿ.ಆರ್ ಸಿಂಧ್ಯಾ ದೇವರಲ್ಲಿ ಪ್ರಾರ್ಥಿಸಿದರು.
ಬಸವಕಲ್ಯಾಣ ಕ್ಷೇತ್ರದ ಶಾಸಕರು ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ನಾವು ಆಸ್ಪತ್ರೆಯ ವೈದ್ಯರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ನಾರಾಯಣರಾವ್ ಅವರು ಒಳ್ಳೆಯ ಕೆಲಸಗಾರರು, ಕ್ಷೇತ್ರದ, ಜಿಲ್ಲೆಯ ಅಭಿವೃದ್ಧಿಗಾಗಿ ದುಡಿಯುತ್ತಿದ್ದಾರೆ. ಅವರು ಬೇಗ ಗುಣಮುಖರಾಗುತ್ತಾರೆ ಎಂಬ ಭರವಸೆ ಇದೆ ಎಂದು ಹೇಳಿದರು.
ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಮಾಜಿ ಸಚಿವ ಪಿ.ಜಿ.ಆರ್, ಸಿಂದ್ಯಾ ಅವರು ಬಿ.ನಾರಾಯಣರಾವ್ ಅವರ ವಿರುದ್ಧ ಪರಾಭವಗೊಂಡಿದ್ದರು.