ಬೀದರ್: ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಅನಗತ್ಯವಾಗಿ ರಸ್ತೆಗೆ ಬಂದ ಯುವಕನೋರ್ವನಿಗೆ ಬಸ್ಕಿ ಹೊಡೆಸಿ ಮಾರ್ಕೆಟ್ ಠಾಣೆ ಪಿಎಸ್ಐ ಸಂಗೀತಾ ಪಾಠ ಕಲಿಸಿದ್ದಾರೆ.
ನಗರದ ಅಂಬೇಡ್ಕರ್ ವೃತ್ತದಲ್ಲಿ ರಾತ್ರಿ ಗಸ್ತಿನಲ್ಲಿದ್ದ ಸಂಗೀತಾ ಅವರು, ಬೈಕ್ ಸವಾರನಿಗೆ ಕೊರೊನಾ ವೈರಸ್ ನಿಯಂತ್ರಣದ ಕುರಿತು ಮನವರಿಕೆ ಮಾಡಿಸಿದ್ದಲ್ಲದೆ, ಬಸ್ಕಿ ಹೊಡೆಸಿ ಬುದ್ಧಿ ಹೇಳಿದ್ದಾರೆ.
ಬೀದರ್ನಲ್ಲಿ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆವರೆಗೆ ಏಪ್ರಿಲ್ 20 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.