ಬೀದರ್ : ರಾಜ್ಯದಲ್ಲಿ ಗೋಹತ್ಯೆ ನಿಷೇಧಕ್ಕೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು. ಬಸವಕಲ್ಯಾಣದ ಅನುಭವ ಮಂಟಪದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು, ಗೋಹತ್ಯೆ ನಿಷೇಧ ಹಾಗೂ ಕಸಾಯಿಖಾನೆಗೆ ಜಾನುವಾರುಗಳ ಸಾಗಣೆ ತಡೆಗಟ್ಟಲು ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ ತಿಳಿಸಿದರು.
ನನಗೆ ಗೃಹ ಖಾತೆ ಬೇಕು. ಇಂಧನ ಖಾತೆ ಬೇಕು. ಅಬಕಾರಿ ಖಾತೇನೇಬೇಕು ಎಂದು ಕೇಳುವವರ ಸಾಲಿನಲ್ಲಿ ನಾನಿಲ್ಲ. ಪಶುಸಂಗೋಪನೆ ಖಾತೆಯನ್ನು ನಾನೇ ಕೇಳಿ ಪಡೆದಿದ್ದೇನೆ. ಗೋಮಾತೆ ಸೇವೆ ಅತ್ಯಂತ ಶ್ರೇಷ್ಠ ಸೇವೆ ಎಂದು ತಿಳಿದು ನಾನೇ ಬಯಸಿ ಖಾತೆಯನ್ನು ಮುಖ್ಯಮಂತ್ರಿ ಬಳಿ ಕೇಳಿದ್ದೇನೆ ಎಂದು ಮಾರ್ಮಿಕವಾಗಿ ನುಡಿದರು
ಅನುಭವ ಮಂಟಪ ಪರಿಸರದಲ್ಲಿ ಗೋಶಾಲೆ ಆರಂಭಿಸಬೇಕು ಎಂದು ವೇದಿಕೆಯಲಿದ್ದ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದೇವರು ಮನವಿ ಮಾಡಿದರು. ಇದಕ್ಕೆ ತಕ್ಷಣ ಪ್ರತಿಕ್ರಿಸಿದ ಸಚಿವ ಪ್ರಭು ಚವ್ಹಾಣ, ಇಲ್ಲಿ ಗೋಶಾಲೆ ಆರಂಭಕ್ಕೆ ಅನುದಾನ ಮಂಜೂರು ಮಾಡಲಾಗುವುದು ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದೇವರು ಸೇರಿದಂತೆ ಪೂಜ್ಯರು, ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.