ETV Bharat / state

ಬೀದರ್​ನಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ ಮಾಡಿದ ಜಿಲ್ಲಾಡಳಿತ!

ಬೀದರ್ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ 24 ಗಂಟೆಗಳ ಸಮಯ ಅವಧಿಯಲ್ಲಿ ಅಧಿಕಾರಿಗಳು ಅಲರ್ಟ್ ಆಗಿರಬೇಕು. ಮೊಬೈಲ್ ಹಾಳಾಗಿದೆ, ನೆಟ್​ವರ್ಕ್ ಇಲ್ಲ, ಬ್ಯಾಟರಿ ಬ್ಯಾಕಪ್ ಇಲ್ಲ ಎನ್ನುವ ಯಾವುದೇ ನೆಪ ಹೇಳಬಾರದು. ಸಾರ್ವಜನಿಕರ ದೂರವಾಣಿ ಕರೆಗಳನ್ನು ಸ್ವೀಕರಿಸಿ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.

Bidar
ವಿಪತ್ತು ಪರಿಹಾರ ಸಭೆ
author img

By

Published : Oct 14, 2020, 9:30 AM IST

ಬೀದರ್: ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮೂನ್ಸೂಚನೆ ನೀಡಿದ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ತುರ್ತು ವಿಪತ್ತು ಪರಿಹಾರ ಸಭೆ ನಡೆಸಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವಿಸ್ತೃತವಾದ ಸಭೆ ನಡೆದಿದೆ.

ತುರ್ತು ವಿಪತ್ತು ಪರಿಹಾರ ಸಭೆ ನಡೆಸಿದ ಜಿಲ್ಲಾಡಳಿತ

ಜಿಲ್ಲಾಧಿಕಾರಿ ರಾಮಚಂದ್ರನ್.ಆರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಕ್ಟೋಬರ್ 13 ಮತ್ತು 14 ಎರಡು ದಿನಗಳು ಸೇರಿ ಬೀದರ್ ಜಿಲ್ಲಾದ್ಯಂತ ಮುಂದಿನ ಐದು ದಿನಗಳಲ್ಲಿ ಭಾರಿ ಪ್ರಮಾಣದ ಮಳೆ ಬೀಳುವ ಹಾಗೂ ಗರಿಷ್ಠ ಉಷ್ಣಾಂಶ 24 - 28 ಸೆಲ್ಸಿಯಸ್ ಕನಿಷ್ಠ ಉಷ್ಣಾಶ 18-19 ಸೆಲ್ಸಿಯಸ್ ಇರುವ ಮತ್ತು ಪ್ರತಿ ಗಂಟೆಗೆ ಗಾಳಿಯ ವೇಗವು 3-7 ಕಿ.ಮೀ ಚಲಿಸುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಇದೆ. ಈ ವಿಷಯವನ್ನು ಯಾರೂ ಕೂಡ ಲಘುವಾಗಿ ತೆಗೆದುಕೊಳ್ಳಬಾರದು. ಪೌರಾಯುಕ್ತರು, ತಹಸೀಲ್ದಾರರು, ತಾ.ಪಂ ಇಒಗಳು, ಮುಖ್ಯಾಧಿಕಾರಿಗಳು ಸೇರಿದಂತೆ ಜವಾಬ್ದಾರಿಯುತ ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಸದ್ಯದ ಪರಿಸ್ಥಿತಿಯ ಸನ್ನಿವೇಶ ಅರಿತು ಕೆಲಸ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಸತತ ಮಳೆಯಿಂದಾಗಿ ಜಿಲ್ಲೆಯಲ್ಲಿನ ಕೆರೆ ಕಟ್ಟೆಗಳಿಂದ ತುಂಬುವ ಡ್ಯಾಮ್​ಗಳಲ್ಲಿನ ನೀರನ್ನು ಗೇಟ್​ಗಳಿಂದ ಹೊರಬಿಡುವ ಮುನ್ನ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ಡ್ಯಾಂ ಸುತ್ತಲಿನ ಜನರಿಗೆ ಕಡ್ಡಾಯವಾಗಿ ಸೂಚನೆ ನೀಡಿಯೇ ನೀರು ಬಿಡಲು ಕ್ರಮವಹಿಸಬೇಕು. ಬಿಟ್ಟುಬಿಡದೇ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಸುಗಮ ಸಂಚಾರ ಹಾಗೂ ಭದ್ರತೆ ದೃಷ್ಟಿಯಿಂದ ಜಿಲ್ಲಾದ್ಯಂತ ಪೊಲೀಸ್ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು ಎಂದರು.

ಬೀದರ್ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ 24 ಗಂಟೆಗಳ ಸಮಯ ಅವಧಿಯಲ್ಲಿ ಅಧಿಕಾರಿಗಳು ಅಲರ್ಟ್ ಆಗಿರಬೇಕು. ಮೊಬೈಲ್ ಹಾಳಾಗಿದೆ, ನೆಟ್​ವರ್ಕ್ ಇಲ್ಲ, ಬ್ಯಾಟರಿ ಬ್ಯಾಕಪ್ ಇಲ್ಲ ಎನ್ನುವ ಯಾವುದೇ ನೆಪ ಹೇಳಬಾರದು. ಸಾರ್ವಜನಿಕರ ದೂರವಾಣಿ ಕರೆಗಳನ್ನು ಸ್ವೀಕರಿಸಿ ಸ್ಪಂದಿಸಬೇಕು. ಹಾನಿ ಸಂಭವಿಸಿದ ಕೂಡಲೇ ಮೇಲಧಿಕಾರಿಗಳಿಗೆ ತಿಳಿಸಿ ತುರ್ತಾಗಿ ವರದಿ ಮಾಡಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ಇಂತಹ ತುರ್ತು ಸನ್ನಿವೇಶದಲ್ಲಿ ಸಿಬ್ಬಂದಿ ಕೂಡ ಕಾಳಜಿ ವಹಿಸಿ ಕೆಲಸ ಮಾಡಬೇಕು. ಯಾವ ಸಿಬ್ಬಂದಿ ಕೂಡ ಅನವಶ್ಯಕವಾಗಿ ರಜೆ ಮೇಲೆ ತೆರಳಬಾರದು. ವಿಪತ್ತು ಎದುರಾದ ಸನ್ನಿವೇಶದಲ್ಲಿ ನಿರ್ಲಕ್ಷ್ಯವಹಿಸಿ ಜೀವಹಾನಿಯಾದರೆ ಪ್ರಯೋಜನವಿಲ್ಲ ಎಂದು ಅಧಿಕಾರಿಗಳು ಮತ್ತು ಸಿಬ್ಬಂದಿಯಲ್ಲಿ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

ಅತಿವೃಷ್ಟಿಯಿಂದಾಗಿ ಇದುವರೆಗೆ ಸಂಭವಿಸಿದ 60 ಜಾನುವಾರು ಹಾನಿ ಪ್ರಕರಣಗಳಲ್ಲಿ 52 ಪ್ರಕರಣಗಳಿಗೆ 9.39 ಲಕ್ಷ ರೂ.ನಷ್ಟು ಪರಿಹಾರ ನೀಡಿದ್ದು, ಬಾಕಿ 8 ಪ್ರಕರಣಗಳಿಗೆ ಕೂಡಲೇ ಪರಿಹಾರ ಕಲ್ಪಿಸಲು ಒತ್ತು ಕೊಡಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಗರಸಭೆ ಪೌರಾಯುಕ್ತರಿಗೆ ಸೂಚನೆ:

ಈ ಮೊದಲೇ ತಿಳಿಸಿದ್ದರೂ ಬೀದರ್ ನಗರದ ರಾಜಕಾಲುವೆಯ ಕೆಲವು ಕಡೆಗಳಲ್ಲಿ ಇದುವರೆಗೆ ಕಸ ತೆಗೆಯದೇ ಇರುವುದರಿಂದ ನೀರು ರಸ್ತೆ ಮೇಲೆ ಹರಿದು ಸಾರ್ವಜನಿಕರಿಗೆ ಕಿರಿಕಿರಿಯಾಗುತ್ತಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಮೂನ್ಸೂಚನೆ ಇರುವುದರಿಂದ ಬೀದರ ನಗರಾದ್ಯಂತ ಎಲ್ಲ ಕಡೆಗಳಲ್ಲಿನ ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ಅಲ್ಲಿನ ಕಸ ತೆಗೆಯುವ ಕಾರ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂದರು.

ಸಭೆಯಲ್ಲಿ ಜಿ.ಪಂ ಸಿಇಒ ಜ್ಞಾನೇಂದ್ರಕುಮಾರ ಗಂಗ್ವಾರ್, ಎಸ್ಪಿ ನಾಗೇಶ್ ಡಿ.ಎಲ್, ಅಪರ ಜಿಲ್ಲಾಧಿಕಾರಿಗಳಾದ ರುದ್ರೇಶ ಗಾಳಿ, ಬೀದರ್ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಶರಣಬಸಪ್ಪ ಕೋಟಪ್ಪಗೋಳ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ತಾರಾಮಣಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.