ETV Bharat / state

ಅನುಭವ ಮಂಟಪಕ್ಕೆ ಅಡಿಗಲ್ಲು ನೆರವೇರಿಸಲು ಕ್ರಮ ಕೈಗೊಳ್ಳುವಂತೆ ಸೇಡಂ ಗೆ ಮನವಿ - Anubhava mantapa trust

ನೂತನ ಅನುಭವ ಮಂಟಪ ನಿರ್ಮಾಣ ಕಾಮಗಾರಿಗೆ ಬೇಗನೇ ಚಾಲನೆ ನೀಡಬೇಕೆಂದು ಅನುಭವ ಮಂಟಪ ಟ್ರಸ್ಟ್ ನ ನಿಯೋಗವು ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ. ಬಸವರಾಜ ಪಾಟೀಲ ಸೇಡಂ ಅವರಿಗೆ ಮನವಿ ಮಾಡಿದೆ.

Basavakalyana
Basavakalyana
author img

By

Published : Oct 11, 2020, 11:47 PM IST

ಬಸವಕಲ್ಯಾಣ: ರಾಜ್ಯ ಸರ್ಕಾರದಿಂದ ನಿರ್ಮಿಸಲು ಉದ್ದೇಶಿಸಿರುವ ನೂತನ ಅನುಭವ ಮಂಟಪ ಕಾಮಗಾರಿಗೆ ಶೀಘ್ರದಲ್ಲಿ ಅಡಿಗಲ್ಲು ನೆರವೇರಿಸಲು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಬೇಕು ಎಂದು ಅನುಭವ ಮಂಟಪ ಟ್ರಸ್ಟ್ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ.ಬಸವರಾಜ ಪಾಟೀಲ ಸೇಡಂ ಅವರಿಗೆ ಮನವಿ ಮಾಡಿದೆ.

ಅನುಭವ ಮಂಟಪ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಡಾ. ಬಸವಲಿಂಗ ಪಟ್ಟದೇವರ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ. ಬಸವರಾಜ ಪಾಟೀಲ ಸೇಡಂ ಅವರ ಬಳಿ ತೆರಳಿದ ಪ್ರಮುಖರ ನಿಯೋಗ ಈ ಕುರಿತು ಮನವಿ ಪತ್ರ ಸಲ್ಲಿಸಿದೆ.

12 ನೇ ಶತಮಾನದಲ್ಲಿ ಜಗತ್ತಿಗೆ ಮೊಟ್ಟ ಮೊದಲ ಬಾರಿಗೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ ಶರಣರ ಅನುಭವ ಮಂಟಪದ ಮರು ನಿರ್ಮಾಣಕ್ಕಾಗಿ ನಾಡಿನ ಹಿರಿಯ ಸಾಹಿತಿ ಗೋ.ರು.ಚನ್ನಬಸಪ್ಪನವರ ನೇತೃತ್ವದ ಸಮಿತಿಯಿಂದ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದ್ದು, ಕಳೆದ ಸಾಲಿನ ಬಜೆಟ್ ನಲ್ಲಿ 500 ಕೋಟಿ ರೂ ಮಂಜೂರು ನೀಡಲಾಗಿದೆ.

ಆದರೆ ಇದುವರೆಗೆ ಅನುಭವ ಮಂಟಪ ನಿರ್ಮಾಣ ಸಂಬಂಧ ಸರ್ಕಾರದ ಯಾವುದೇ ಪ್ರಕ್ರಿಯೆಗಳು ನಡೆಯದಿರುವುದು ಬಸವ ಭಕ್ತರಲ್ಲಿ ನಿರಾಸೆ ಮೂಡಿಸುವಂತೆ ಮಾಡಿದೆ. ಆದಷ್ಟು ಬೇಗ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಅಡಿಗಲ್ಲು ನೆರವೇರಿಸಿ, ಕಾಮಗಾರಿಗೆ ಚಾಲನೆ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ನವರಿಗೆ ಮನವರಿಕೆ ಮಾಡಬೇಕು ಎಂದು ನಿಯೋಗದ ಪ್ರಮುಖರು ಸೇಡಂ ಅವರಲ್ಲಿ ಮನವಿ ಮಾಡಿದ್ದಾರೆ.

ಅನುಭವ ಮಂಟಪದ ಟ್ರಸ್ಟ್ನ ಅಧ್ಯಕ್ಷರಾದ ಶ್ರೀ ಡಾ. ಬಸವಲಿಂಗ ಪಟ್ಟದೇವರು, ಭಾಲ್ಕಿ ಹಿರೇಮಠದ ಶ್ರೀ ಗುರುಬಸವ ಪಟ್ಟದೇವರು, ಶ್ರೀ ಶಿವಾನಂದ ಸ್ವಾಮಿಜಿ, ಅನುಭವ ಮಂಟಪ ಟ್ರಸ್ಟ್ ಉಪಾಧ್ಯಕ್ಷ ವೈಜನಾಥ ಕಾಮಶೆಟ್ಟಿ, ಮುಖಂಡರಾದ ಶಿವರಾಜ ನರಶೆಟ್ಟಿ, ರೇವಣಸಿದಪ್ಪ ಜಲಾದೆ, ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಗುರುನಾಥ ಗಡ್ಡೆ, ಡಾ. ಎಸ್.ಬಿ. ದುರ್ಗೆ, ಮಾಲತಿ ಎವಳೆ, ಲೀಲಾ ಸೇರಿದಂತೆ ಪ್ರಮುಖರು ನಿಯೋಗದಲ್ಲಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.