ಬೀದರ್ : ಅತೀ ವೇಗವಾಗಿ ಬಂದ ಬೈಕ್ ಸವಾರ ನೋಡು ನೋಡುತ್ತಲೇ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಢಿಕ್ಕಿ ಹೊಡೆದಿರುವ ಘಟನೆ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ನಡೆದಿದೆ. ಡಿಕ್ಕಿ ಹೊಡೆದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಭಾಲ್ಕಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಈ ಘಟನೆ ನಡೆದಿದೆ. ವೃತ್ತದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದರಿಂದ ಮಹಿಳೆಯು ತನ್ನ ಎಚ್ಚರಿಕೆಯಲ್ಲಿ ಅತ್ತ-ಇತ್ತ ನೋಡಿ ರಸ್ತೆ ದಾಟುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬೈಕ್ ಸವಾರ ಇದ್ದಕ್ಕಿದ್ದಂತೆ ಮಹಿಳೆಗೆ ಢಿಕ್ಕಿ ಹೊಡೆದಿದ್ದಾನೆ. ಅಪಘಾತದ ದೃಶ್ಯ ವೃತ್ತದಲ್ಲಿನ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಘಟನೆಯಿಂದ ಗಾಯಗೊಂಡ ಮಹಿಳೆಯನ್ನು ಸ್ಥಳೀಯರು ಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯ ವಿಡಿಯೋ ವೈರಲ್ ಆಗಿದೆ.