ಬೀದರ್: ಮಕ್ಕಳನ್ನು ಶಾಲೆಗೆ ಸಾಗಿಸುತ್ತಿದ್ದ ಸ್ಕೂಲ್ ವ್ಯಾನ್ ಪಲ್ಟಿಯಾಗಿದ್ದು, ಮಕ್ಕಳಿಬ್ಬರು ಗಾಯಗೊಂಡಿದ್ದಾರೆ. ವಿಷಯ ತಿಳಿದ ಪೋಷಕರು ಶಾಲಾ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಸಪ್ತಗಿರಿ ಖಾಸಗಿ ಶಾಲೆಗೆ ಮಕ್ಕಳನ್ನು ಕರೆತರುತ್ತಿದ್ದ ವ್ಯಾನ್ ನಗರದ ಚಿದ್ರಿ ಬಳಿ ಚಾಲಕನ ಅಜಾಗರೂಕತೆಯಿಂದ ವ್ಯಾನ್ ಪಲ್ಟಿಯಾಗಿದೆ ಎನ್ನಲಾಗಿದೆ.
ಗಾಯಗೊಂಡಿರುವ ಮಕ್ಕಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ. ವಾಹನ ಅಪಘಾತ ವಿಷಯ ತಿಳಿದಿರುವ ಪಾಲಕರು ಶಾಲೆಗೆ ಆಗಮಿಸಿ, ಆಡಳಿತ ಮಂಡಳಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಕೂಡಲೇ ಚಾಲಕನನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.