ಬಸವಕಲ್ಯಾಣ : ಗ್ರಾಮೀಣ ಭಾಗದ ಸಂಸತ್ತು ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪಕ್ಷ ಬೇಧ ಮರೆತು ಅಭಿವೃದ್ಧಿ ಪರ ಇರುವ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದು ಮಾಜಿ ಶಾಸಕ, ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಖೂಬಾ ತಿಳಿಸಿದರು.
ತಮ್ಮ ಪಕ್ಷದ ಕಚೇರಿಯಲ್ಲಿ ನಡೆಸಿದ ಮಾತನಾಡಿದ ಅವರು, ಗ್ರಾಪಂ ಚುನಾವಣೆ ವೇಳೆ ಅಭ್ಯರ್ಥಿಗಳು ಕೋಮು ದ್ವೇಷಗಳಿಗೆ ಆಸ್ಪದ ನೀಡದೆ ಶಾಂತಿಯುತ ಚುನಾವಣೆ ನಡೆಸಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು. ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಪಂಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ.
ಗ್ರಾಪಂಗಳಿಗೆ ಒಳ್ಳೆಯ ಅಭ್ಯರ್ಥಿಗಳು ಆಯ್ಕೆಯಾದಲ್ಲಿ ಮಾತ್ರ ಗ್ರಾಮದ ಅಭಿವೃದ್ಧಿ ಸಾಧ್ಯ. ಹೀಗಾಗಿ ಮತದಾರರು ಒಗ್ಗಟ್ಟಿನಿಂದ ಜನಸೇವೆಯಲ್ಲಿ ತೊಡಗಿಸಿಕೊಳ್ಳುವ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು. ಅಭ್ಯರ್ಥಿಗಳು ಚುನಾವಣೆಯಲ್ಲಿ ಸೋಲು, ಗೆಲುವು ಸಮಾನಾಗಿ ಸ್ವೀಕರಿಸಬೇಕು ಎಂದು ತಿಳಿಸಿದರು.
ನಗರಸಭೆಯಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸ್ಥಾಯಿ ಸಮಿತಿ ರಚನೆ ಮಾಡಲಾಗಿದೆ, ಎಲ್ಲರಿಗೂ ಅಭಿನಂದಿಸುತ್ತೇನೆ. ಎಲ್ಲರೂ ಕೂಡಿ ನಗರದ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ಸಲಹೆ ನೀಡಿದರು. ದಿ. ಶಾಸಕ ಬಿ. ನಾರಾಯಣರಾವ್ ಅವರ ಅವಧಿಯಲ್ಲಿ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದಾರೆ. ಆದರೆ, ಅವರ ನಿಧನದ ನಂತರ ಕೆಲವು ಹಲವಾರು ಅಭಿವೃದ್ಧಿ ಕಾರ್ಯಗಳು ನೆನೆಗುದಿಗೆ ಬಿದ್ದಿವೆ. ಅರ್ಧಕ್ಕೆ ನಿಂತಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ತಿಳಿಸಿದರು.
ಉಜಿರೆಯ 8 ವರ್ಷದ ಬಾಲಕ ಕಿಡ್ನಾಪ್ ಕೇಸ್ ಸುಖಾಂತ್ಯ: ಕೋಲಾರದಲ್ಲಿ ಅಪಹರಣಕಾರರ ಬಂಧನ
ಹಿಂದುಳಿದ ಭಾಗದಲ್ಲಿ ಇರುವ ಬಸವಕಲ್ಯಾಣದಲ್ಲಿ ಕ್ಷೇತ್ರದಲ್ಲಿ ನಿರುದ್ಯೋಗದ ಸಮಸ್ಯೆ ನಿವಾರಣೆಗಾಗಿ ಕೈಗಾರಿಕಾ ಪ್ರದೇಶಗಳಲ್ಲಿ ಸ್ಥಳಾವಕಾಶ ಮಾಡಿ ದೊಡ್ಡ ಕಾರ್ಖಾನೆಗಳನ್ನು ಸ್ಥಾಪಿಸಿದ್ರೆ, ಇಲ್ಲಿನ ಜನರಿಗೆ ಉದ್ಯೋಗ ಸಿಗುವ ಜೊತೆಗೆ ಆರ್ಥಿಕ ಅಭಿವೃದ್ಧಿಗೆ ಸಹಕಾರವಾಗುತ್ತದೆ ಎಂದು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದ್ದು, ಅವರೆಲ್ಲ ಅಭಿವೃದ್ಧಿಪಡಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಕೆಲವೇ ದಿನಗಳಲ್ಲಿ ನಡೆಯಲಿರುವ ಕ್ಷೇತ್ರದ ಉಪ ಚುನಾವಣೆ ಬಗ್ಗೆ ಎಲ್ಲೆಡೆ ಭಾರಿ ಚರ್ಚೆ ನಡೆಯುತ್ತಿವೆ. ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಪಕ್ಷದಿಂದ ಅನೇಕ ಮುಖಂಡರು ಟಿಕೆಟ್ ಕೇಳುವ ಮೂಲಕ ತಮ್ಮ ಹಕ್ಕು ಕೇಳುತ್ತಿದ್ದಾರೆ. ಆದರೆ, ಪಕ್ಷದಲ್ಲಿ ಯಾವುದೇ ಗೊಂದಲ ಅಥವಾ ಭಿನ್ನಾಭಿಪ್ರಾಯಗಳಿಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ, ಸ್ಥಳೀಯರಿಗೆ ಟಿಕೆಟ್ ಸಿಗುವ ಭರವಸೆ ಇದೆ. ಸ್ಥಳೀಯರ ಪೈಕಿ ಟಿಕೆಟ್ ನೀಡಿದ್ರೂ ಎಲ್ಲರೂ ಕೂಡಿ ಪಕ್ಷ ಸೂಚಿಸಿದ ಅಭ್ಯರ್ಥಿಗೆ ಗೆಲ್ಲಿಸಲು ಶ್ರಮಿಸುತ್ತೇವೆ ಎಂದು ತಿಳಿಸಿದರು.
ಉಪ ಚುನಾವಣೆಗೆ ನಾನು ಸೇರಿದಂತೆ ಬಿಜೆಪಿಯಿಂದ ಸುಮಾರು 12 ಜನ ಟಿಕೆಟ್ ಆಕಾಂಕ್ಷಿಗಳಿದ್ದೇವೆ. ಅದರಲ್ಲಿ ಸಂಜಯ ಪಟವಾರಿ, ಪ್ರದೀಪ ವಾತಡೆ, ಗುಂಡುರೆಡ್ಡಿ, ಅನಿಲ ಭುಸಾರೆ, ವಿಜಯ ಮಂಠಾಳೆ, ಲತಾ ಹಾರಕೂಡೆ, ಉಮೇಶ ಬಿರಬಿಟ್ಟೆ, ಸುಧೀರ ಕಾಡಾದಿ, ರವಿ ಚಂದನಕೇರೆ ಮತ್ತು ಅರವಿಂದ ಮುತ್ತೆ ಕೇಳುತ್ತಿದ್ದಾರೆ. ಇವರೆಲ್ಲರೂ ಕೂಡ ಟಿಕೆಟ್‌ಗಾಗಿ ಅರ್ಹರಾಗಿದ್ದಾರೆ. ಆದರೆ, ಇವರೆಲ್ಲರಿಗಿಂತಲೂ ನನಗೆ ಹಕ್ಕು ಜಾಸ್ತಿ ಇದೆ. ಟಿಕೆಟ್ ಯಾರಿಗೆ ಸಿಕ್ಕರೂ ಎಲ್ಲರೂ ಕೂಡಿಕೊಂಡು ಚುನಾವಣೆಯಲ್ಲಿ ಕೆಲಸ ಮಾಡಬೇಕಾಗಿದೆ ಎಂದರು.