ಬೀದರ್: ಮಹಾರಾಷ್ಟ್ರದ ಅಹಮದಾಪುರ್ ಮಠದ ಶತಾಯುಷಿ ಪೂಜ್ಯ ಡಾ. ಶಿವಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ.
ಲಿಂಗಾಯತ ಸ್ವತಂತ್ರ ಧರ್ಮದ ಹೋರಾಟದಲ್ಲಿ ಲಿಂ. ಮಾತೆ ಮಹಾದೇವಿಗೆ ಮಹಾರಾಷ್ಟ್ರದಲ್ಲಿ ಮುಂಚೂಣಿಯಲ್ಲಿ ಸಾಥ್ ನೀಡಿದ ಶಿವಲಿಂಗ ಶಿವಾಚಾರ್ಯರರು ಲಕ್ಷಾಂತರ ಭಕ್ತರನ್ನು ಅಗಲಿದ್ದಾರೆ.
ಮಹಾರಾಷ್ಟ್ರ ಸೇರಿದಂತೆ ತೆಲಂಗಾಣ, ಆಂಧ್ರ ಪ್ರದೇಶ, ತಮಿಳನಾಡು, ಕೇರಳ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶ್ರೀಗಳು ಅಪಾರ ಭಕ್ತ ಸಮೂಹ ಹೊಂದಿದ್ದರು.