ETV Bharat / state

ರೈತರ ಸಮಸ್ಯೆ ಕುರಿತು ಚರ್ಚೆಗಾಗಿ ವಿಶೇಷ ಅಧಿವೇಶನ ಕರೆಯಬೇಕು: ವಿಪಕ್ಷ ನಾಯಕ ಸಿದ್ದರಾಮಯ್ಯ

ಹಿಂದಿನ ವರ್ಷ ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ನೆರೆ ಹಾವಳಿ ಸಂಭವಿಸಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿತ್ತು. ಆದರೆ, ಸರ್ಕಾರದಿಂದ ಇದುವರೆಗೂ ಪರಿಹಾರ ಕಲ್ಪಿಸಲಾಗಿಲ್ಲ. ಬಿಜೆಪಿ ಸರ್ಕಾರ ಕಣ್ಣು, ಕಿವಿ, ಮೂಗು, ಬಾಯಿ ಸೇರಿದಂತೆ ಪಂಚೇಂದ್ರಿಯಗಳನ್ನು ಕಳೆದುಕೊಂಡಿದೆ. ಸುಳ್ಳೇ ಇವರ ಮನೆ ದೇವರು ಆಗಿದೆ..

basavakalyana
ಸುದ್ದಿಗೋಷ್ಠಿ
author img

By

Published : Oct 25, 2020, 11:55 PM IST

ಬಸವಕಲ್ಯಾಣ: ರಾಜ್ಯದಲ್ಲಿ ಅತಿವೃಷ್ಟಿಯಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದ್ದು, ರೈತರ ಸಮಸ್ಯೆ ಕುರಿತು ಚರ್ಚಿಸಿ ಪರಿಹಾರ ಕಲ್ಪಿಸಲು ಕೂಡಲೇ ವಿಧಾನ ಸಭೆ ವಿಶೇಷ ಅಧಿವೇಶನ ಕರೆಯಬೇಕು ಎಂದು ವಿಧಾನ ಸಭೆ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ತಾಲೂಕಿನ ವಿವಿಧೆಡೆ ಅತಿವೃಷ್ಟಿ ಹಾನಿ ವೀಕ್ಷಣೆ ನಡೆಸಿದ ನಂತರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಸಿರು ಶಾಲು ಹಾಕಿಕೊಂಡು ಪ್ರಮಾಣ ವಚನ ಸ್ವೀಕರಿಸಿದರೆ ಸಾಲದು. ತಕ್ಷಣ ವಿಧಾನಸಭೆ ಜಂಟಿ ಅಧಿವೇಶನ ನಡೆಸಿ, ರೈತರಿಗೆ ಸೂಕ್ತ ಪರಿಹಾರ ಕಲ್ಪಿಸಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಸಂಭವಿಸಿದ ಅತಿವೃಷ್ಟಿಯಿಂದಾಗಿ ರೈತರು ಸಂಪೂರ್ಣ ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ, ಕಷ್ಟದಲ್ಲಿರುವ ರೈತರ ನೆರವಿಗೆ ಬರಬೇಕಿದ್ದ ಸರ್ಕಾರ ನಯಾ ಪೈಸೆ ಪರಿಹಾರ ಧನ ಬಿಡುಗಡೆ ಮಾಡದೇ ನಿರ್ಲಕ್ಷ ವಹಿಸಿದೆ. ಹಿಂದಿನ ವರ್ಷ ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ನೆರೆ ಹಾವಳಿ ಸಂಭವಿಸಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿತ್ತು. ಆದರೆ, ಸರ್ಕಾರದಿಂದ ಇದುವರೆಗೂ ಪರಿಹಾರ ಕಲ್ಪಿಸಲಾಗಿಲ್ಲ. ಬಿಜೆಪಿ ಸರ್ಕಾರ ಕಣ್ಣು, ಕಿವಿ, ಮೂಗು, ಬಾಯಿ ಸೇರಿದಂತೆ ಪಂಚೇಂದ್ರಿಯಗಳನ್ನು ಕಳೆದುಕೊಂಡಿದೆ. ಸುಳ್ಳೇ ಇವರ ಮನೆ ದೇವರು ಆಗಿದೆ ಎಂದು ಸರ್ಕಾರದ ವಿರುದ್ಧ ಹರಿ ಹಾಯ್ದರು.

ಮುಖ್ಯಮಂತ್ರಿಗಳು ಕೇವಲ ವೈಮಾನಿಕ ಸಮೀಕ್ಷೆ ನಡೆಸಿ ತೆರಳಿದ್ದಾರೆ. ಕಂದಾಯ ಮಂತ್ರಿಗಳು ಕಾಟಾಚಾರಕ್ಕೆ ಬಂದು ಹೋಗಿದ್ದಾರೆ. ಬೀದರ್ ಜಿಲ್ಲೆಯಲ್ಲಿ 2 ಲಕ್ಷದ 50 ಸಾವಿರ ಹೆಕ್ಟೇರ್ ಬೆಳೆ ಹಾನಿಯಾಗಿದೆ. ಪ್ರತಿ ಎಕರೆಗೆ 20 ಸಾವಿರ ರೂ. ನಂತೆ 1,500 ಕೋಟಿ ರೂ ಮೌಲ್ಯದ ಬೆಳೆಯೂ ನಷ್ಟವಾಗಿದೆ. ಪ್ರವಾಹದಿಂದ 9 ಜನರು ಮೃತಪಟ್ಟಿದ್ದು, 1,700 ಮನೆಗಳು ಕುಸಿದು ಬಿದ್ದಿವೆ. ಕೆಲವು ಕಡೆ ಬೆಳೆಹಾನಿ ಸರ್ವೇ ಮಾಡಿದ್ದಾರೆ.

ಇನ್ನು ಕೆಲವು ಕಡೆ ಸಮೀಕ್ಷೆಯೇ ಮಾಡಿಲ್ಲ. ಸರ್ಕಾರದಿಂದ ಇದುವರೆಗೆ 1 ನಯಾ ಪೈಸೆ ಪರಿಹಾರ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದ ಅವರು, ಕೇವಲ ಜಿಲ್ಲಾ ಮಟ್ಟದ ಅಧಿಕಾರಿಗಳು ಕೊಟ್ಟ ಮಾಹಿತಿಯನ್ನು ಪಡೆದುಕೊಂಡು ಹೋದರೆ ಸಾಲದು, ರೈತರ ಜಮೀನುಗಳಿಗೆ ಭೇಟಿ ನೀಡಿ ವಸ್ತುಸ್ಥಿತಿ ವೀಕ್ಷಿಸಬೇಕು ಎಂದು ಸಲಹೆ ನೀಡಿದರು.

ಬೀದರ್​, ಕಲಬುರಗಿ, ವಿಜಯಪುರ, ಬೆಳಗಾವಿ ಜಿಲ್ಲೆಗಳಲ್ಲಿ ಬೆಳೆ ಹಾನಿ ಸಮೀಕ್ಷೆ ಮಾಡಿದ ನಂತರ ಬೆಳೆ ಹಾನಿ ಕುರಿತು ವಾಸ್ತವಂಶದ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವ ಜೊತೆಗೆ ರೈತರಿಗೆ ತಕ್ಷಣ ಪರಿಹಾರ ಕಲ್ಪಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.