ETV Bharat / state

'ST ಸಮುದಾಯಕ್ಕೆ 7.5 ಮೀಸಲಾತಿ ನೀಡದಿದ್ದರೆ, ಬಿಎಸ್‌ವೈ ನಿವಾಸಕ್ಕೆ ಮುತ್ತಿಗೆ' - ವಾಲ್ಮೀಕಿ ಪ್ರಸನ್ನಾಂದ ಸ್ವಾಮೀಜಿ

ವಾಲ್ಮೀಕಿ ಸಮುದಾಯಕ್ಕೆ ಶೇ 7.5 ಮೀಸಲಾತಿ ನೀಡದಿದ್ದರೆ ವಿಧಾನ ಸೌಧ ಹಾಗೂ ಮುಖ್ಯಮಂತ್ರಿ ಬಿಎಸ್‌ವೈ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷ ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

Siege of BSY residence if not given reservation: Valmiki Prasannananda swamy
ಎಸ್ಟಿ ಸಮುದಾಯಕ್ಕೆ 7.5 ಮೀಸಲಾತಿ ನೀಡದಿದ್ದರೆ, ಬಿಎಸ್‌ವೈ ನಿವಾಸಕ್ಕೆ ಮುತ್ತಿಗೆ : ವಾಲ್ಮೀಕಿ ಪ್ರಸನ್ನಾಂದ ಸ್ವಾಮಿ
author img

By

Published : Dec 28, 2019, 11:35 AM IST

ಹೊಸಪೇಟೆ: ವಾಲ್ಮೀಕಿ ಸಮುದಾಯಕ್ಕೆ ಶೇ 7.5 ಮೀಸಲಾತಿ ನೀಡದಿದ್ದರೆ, ವಿಧಾನ ಸೌಧ ಹಾಗೂ ಮುಖ್ಯಮಂತ್ರಿ ಬಿಎಸ್‌ವೈ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷ ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿ

ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಇಂದು ವಾಲ್ಮೀಕಿ ಜಾತ್ರೆ ನಿಮಿತ್ಯವಾಗಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಫೆಬ್ರುವರಿ 9ರಂದು ರಾಜನಹಳ್ಳಿಯಲ್ಲಿ ನಡೆಯಲಿರುವ ವಾಲ್ಮೀಕಿ ಜಾತ್ರಾ ಮಹೋತ್ಸವ ದಿನದಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು, ಪರಿಶಿಷ್ಟ ಪಂಗಡಕ್ಕೆ ಶೇ 7.5ರಷ್ಟು ಮೀಸಲಾತಿ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ಅವರನ್ನು ವಾಲ್ಮೀಕಿ ಸಮುದಾಯ ಮನೆಗೆ ಕಳುಹಿಸಲಿದೆ ಎಂದು ಅಕ್ರೋಶ ವ್ಯಕ್ತಪಡಿಸಿದರು.

ಸಂವಿಧಾನಾತ್ಮಕವಾದ ಹಕ್ಕುಗಳನ್ನು ಸಮುದಾಯಕ್ಕೆ ಒದಗಿಸದಿದ್ದರೆ, ಹೋರಾಟವನ್ನು ತೀವ್ರಗೊಳಿಸಲಾಗುವುದು. ಮೊದಲು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ನೀಡಲಿ, ಬಳಿಕ ಬೇರೆ ಸಮುದಾಯವನ್ನು ಎಸ್ಟಿ ವರ್ಗಕ್ಕೆ ಸೇರಿಸಲಿ ಎಂದು ಬೇಡಿಕೆಯಿಟ್ಟರು.

ಉಪಚುನಾವಣೆಯಲ್ಲಿ ನಮ್ಮ ಸಮುದಾಯವನ್ನು ವೋಟ್ ಬ್ಯಾಂಕ್ ಮಾಡಿಕೊಳ್ಳಲಾಗಿದೆ. ಚುನಾವಣೆ ಸಂದರ್ಭದಲ್ಲಿ ನಾಯಕ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗುವುದು ಎಂದು ಬಿಜೆಪಿ ಭರವಸೆ ನೀಡಿತ್ತು. ಪಕ್ಷದಲ್ಲಿ ಇಬ್ಬರು ನಾಯಕ ಸಮುದಾಯದ ಪ್ರಬಲ ನಾಯಕರಿದ್ದಾರೆ. ಅವರಲ್ಲಿ ಒಬ್ಬರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಕಳೆದ 45 ವರ್ಷದಿಂದ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ. ರಾಜ್ಯ ಸರ್ಕಾರಗಳ ಇಚ್ಛಾಶಕ್ತಿ ಕೊರತೆಯಿಂದ ಹೀಗಾಗುತ್ತಿದೆ. ತಮಿಳುನಾಡು ಹಾಗೂ ಮಹರಾಷ್ಟ್ರದಲ್ಲಿ ಶೇ.60ರಷ್ಟು ಮೀಸಲಾತಿ ನೀಡಲಾಗಿದೆ. ಅದೇ ರೀತಿಯಾಗಿ ಕರ್ನಾಟಕದಲ್ಲೂ ನೀಡಬೇಕು. ಸಮುದಾಯದ ಅಭಿವೃದ್ಧಿ ಕುರಿತಾಗಿ ಆಯೋಗವು ಕೆಲ ದಿನಗಳಲ್ಲಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ಅದಕ್ಕೆ ಕ್ಯಾಬಿನೆಟ್‌ನೊಳಗೆ ಒಪ್ಪಿಗೆ ಸೂಚಿಸಬೇಕು ಎಂದು ಆಗ್ರಹಿಸಿದರು.

Intro:ಎಸ್ಟಿ ಸಮುದಾಯಕ್ಕೆ ೭.೫ ಮೀಸಲಾತಿ ನೀಡದಿದ್ದರೆ, ಬಿಎಸ್‌ವೈ ನಿವಾಸಕ್ಕೆ ಮುತ್ತಿಗೆ : ವಾಲ್ಮೀಕಿ ಪ್ರಸನ್ನಾಂದ ಸ್ವಾಮಿ

ಹೊಸಪೇಟೆ:ವಾಲ್ಮೀಕಿ ಸಮುದಾಯಕ್ಕೆ ೭.೫ ಮೀಸಲಾತಿ ನೀಡದಿದ್ದರೆ, ವಿಧಾನ ಸೌಧ ಹಾಗೂ ಮುಖ್ಯಮಂತ್ರಿ ಬಿಎಸ್‌ವೈ ನಿವಾಸ ಮುತ್ತಿಗೆ ಹಾಕಲಾಗುವುದು ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷ ವಾಲ್ಮೀಕಿ ಪ್ರಸನ್ನಾಂದ ಸ್ವಾಮೀಜಿ ರಾಜ್ಯ ಸರಕಾರಕ್ಕೆ ಎಚ್ಚರಿಕೆಯನ್ನು ನೀಡಿದರು.Body:ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ವಾಲ್ಮೀಕಿ ಜಾತ್ರೆ ನಿಮಿತ್ಯವಾಗಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಫೆ.೦೯ ರಂದು ರಾಜನಹಳ್ಳಿಯಲ್ಲಿ ನಡೆಯಲಿರುವ ವಾಲ್ಮೀಕಿ ಜಾತ್ರಾ ಮಹೋತ್ಸವ ದಿನದಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರಿಶಿಷ್ಟ ಪಂಗಡಕ್ಕೆ ೭.೫ ರಷ್ಟು ಮೀಸಲಾತಿ ಘೋಷಣೆ ಮಾಡಬೇಕು ಇಲ್ಲವಾದಲ್ಲಿ ಅವರನ್ನು ವಾಲ್ಮೀಕಿ ಸಮುದಾಯ ಮನೆಗೆ ಕಳುಹಿಸಲಿದ್ದಾರೆ ಎಂದು ಅಕ್ರೋಶವನ್ನು ವ್ಯಕ್ತ ಪಡಿಸಿದರು.

ಸಂವಿಧಾನಾತ್ಮಕವಾದ ಹಕ್ಕುಗಳನ್ನು ಸಮುದಾಯಕ್ಕೆ ಒದಗಿಸದಿದ್ದರೆ, ಹೋರಾಟವನ್ನು ತೀವ್ರಗೊಳಿಸಲಾಗುವುದು. ಮೊದಲು ಪರಿಶಿಷ್ಟ ಪಂಗಡಕ್ಕೆ ೭.೫ ಮೀಸಲಾತಿಯನ್ನು ನೀಡಬೇಕು. ಬಳಿಕ ಬೇರೆ ಸಮುದಾಯವನ್ನು ಎಸ್ಟಿಗೆ ಸೇರಿಸಲಿ ಎಂದು ಹೇಳಿದರು.
ಉಪಚುನಾವಣೆಯಲ್ಲಿ ಸಮುದಾಯವನ್ನು ವೋಟ್ ಬ್ಯಾಂಕ್ ಮಾಡಿಕೊಳ್ಳಲಾಗಿದೆ. ಚುನಾವಣೆ ಸಂದರ್ಭದಲ್ಲಿ ನಾಯಕ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಲಾಗುವುದು ಎಂದು ಬಿಜೆಪಿ ಭರವಸೆ ನೀಡಿತ್ತು. ಪಕ್ಷದಲ್ಲಿ ಇಬ್ಬರು ನಾಯಕ ಸಮುದಾಯದ ಪ್ರಬಲ ನಾಯಕರು ಇದ್ದಾರೆ. ಅವರಲ್ಲಿ ಒಬ್ಬರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದರು.
ವಾಲ್ಮೀಕಿ ಜಾತ್ರೆ ಹರಿಹರ ತಾಲೂಕಿನ ರಾಜನಹಳ್ಳಿಯ ಗುರುಪೀಠದಲ್ಲಿ ಫೆ.೦೮,೦೯ ರಂದು ವಾಲ್ಮೀಕಿ ಜಾತ್ರೆ-೨ ನಡೆಯಲಿದೆ. ಮಠದ ೨೨ನೇ ವಾರ್ಷಿಕೋತ್ಸವ ಹಾಗೂ ಪುಣ್ಯಾನಂದಪುರಿ ಸ್ವಾಮೀಜಿ ೧೩ನೇ ಪುಣ್ಯಾರಾಧನೆ ಹಾಗೂ ೧೨ನೇ ವರ್ಷದ ನನ್ನ ಪಟ್ಟಾಧಿಕಾರ ಮಹೋತ್ಸವ ಅಂಗವಾಗಿ ನಡೆಯುತ್ತಿದೆ ಎಂದು ಪ್ರಸನ್ನಾಂದ ಸ್ವಾಮೀಜಿ ತಿಳಿಸಿದರು.

ಕಳೆದ ೪೫ ವರ್ಷದಿಂದ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ. ರಾಜ್ಯ ಸರಕಾರಗಳ ಇಚ್ಛಾಶಕ್ತಿ ಕೊರತೆಯಿಂದ ಹೀಗಾಗುತ್ತಿದೆ. ತಮಿಳನಾಡು ಹಾಗೂ ಮಹಾರಾಷ್ಟ್ರದಲ್ಲಿ ಶೇ.೬೦ರಷ್ಟು ಮೀಸಲಾತಿಯನ್ನು ನೀಡಲಾಗಿದೆ. ಅದೇ ತರನಾಗಿ ಕರ್ನಾಟಕದಲ್ಲಿ ನೀಡಬೇಕು. ಸಮುದಾಯದ ಅಭಿವೃದ್ಧಿ ಕುರಿತಾಗಿ ಆಯೋಗವು ಕೆಳ ದಿನಗಳಲ್ಲಿ ವರದಿಯನ್ನು ಸರಕಾರಕ್ಕೆ ಸಲ್ಲಿಸಲಿದೆ. ಅದನ್ನು ಕ್ಯಾಬಿನೆಟ್‌ನೊಳಗೆ ಒಪ್ಪಿಗೆ ಸೂಚಿಸಬೇಕು ಎಂದು ಆಗ್ರಹಿಸಿದರು.
Conclusion:KN_HPT_3_VALMIKASWAMIJI_ST_MISALATI_SCRIPT_KA10028
ETV Bharat Logo

Copyright © 2025 Ushodaya Enterprises Pvt. Ltd., All Rights Reserved.