ETV Bharat / state

ಕೊರೊನಾ ಸೋಂಕಿನಿಂದ ಬಳಲುತ್ತಿರುವ ಶಾಸಕ ಬಿ.ನಾರಾಯಣರಾವ್​ ಚೇತರಿಗೆ ವಿಶೇಷ ಪೂಜೆ... - ಚಿಕಿತ್ಸೆ ಪಡೆಯುತ್ತಿರುವ ಶಾಸಕ ಬಿ.ನಾರಾಯಣರಾವ್

ಕೊರೊನಾದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ಷೇತ್ರದ ಶಾಸಕ ಬಿ.ನಾರಾಯಣರಾವ್​ ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ನಗರದ ಶಾಸಕರ ಕಾರ್ಯಾಲಯದಲ್ಲಿ ಗುರುವಾರ ಪೂಜೆ ಮತ್ತು ಪ್ರಾರ್ಥನೆ ನಡೆಸಲಾಯಿತು.

basavakalyana
ಶಾಸಕರ ಕಾರ್ಯಾಲಯದಲ್ಲಿ ವಿಶೇಷ ಪೂಜೆ
author img

By

Published : Sep 4, 2020, 1:30 AM IST

ಬಸವಕಲ್ಯಾಣ: ಕೊರೊನಾದಿಂದ ಬಳಲಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ಷೇತ್ರದ ಶಾಸಕ ಬಿ.ನಾರಾಯಣರಾವ್​ ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ನಗರದ ಶಾಸಕರ ಕಾರ್ಯಾಲಯದಲ್ಲಿ ಗುರುವಾರ ಪೂಜೆ ಮತ್ತು ಪ್ರಾರ್ಥನೆ ನಡೆಸಲಾಯಿತು.

ಮುಂಜಾಗೃತಾ ಕ್ರಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವ ಜೊತೆಗೆ ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುತ್ತಲೇ ನಿರಂತರವಾಗಿ ಜನ ಸೇವೆಯಲ್ಲಿ ತೊಗಿಸಿಕೊಂಡಿರುವ ಶಾಸಕರು ಇತ್ತೀಚೆಗೆ ಮುಂಜಾಗೃತಾ ಕ್ರಮವಾಗಿ ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದರು. ವರದಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಸಕರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿ ಶಾಸಕರ ಕಾರ್ಯಾಲಯದಲ್ಲಿ ಪಕ್ಷದ ಕಾರ್ಯರ್ಕರಿಂದ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಲಾಯಿತು.

ಪಕ್ಷದ ತಾಲೂಕು ಅಧ್ಯಕ್ಷ ನೀಲಕಂಠ ರಾಠೋಡ, ನಗರ ಘಟಕ ಅಧ್ಯಕ್ಷ ಮೀರ ಅಜರಲಿ ನವರಂಗ, ಜಿಪಂ ಸದಸ್ಯ ರಾಜಶೇಖರ ಮೇತ್ರೆ, ನಗರಸಭೆ ಸದಸ್ಯರಾದ ರವೀಂದ್ರ ಗಾಯಕವಾಡ, ರವೀಂದ್ರ ಬೋರೊಳೆ, ಪ್ರಮುಖರಾದ ಸಜಯಸಿಂಗ್ ಹಜಾರಿ, ಬಸವರಾಜ ಸ್ವಾಮಿ, ಖಲೀಲ ಅಹ್ಮದ, ಖುತಬೊದ್ದಿನ್ ಸೇರಿದಂತೆ ಪಕ್ಷದ ನಗರಸಭೆಯ ಪಕ್ಷದ ಸದಸ್ಯರು ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದರು.

ಶಾಸಕರ ಆರೋಗ್ಯ ಚೇತರಿಕೆಗಾಗಿ ನಗರದ ಐತಿಹಾಸಿಕ ರಾಜಾಬಾಗ್ ಸವಾರ್ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಬಡವರಿಗೆ ಅನ್ನ ಸಂತರ್ಪಣೆ ಮಾಡಲಾಯಿತು. ತಾಲೂಕಿನ ಗೋರ್ಟಾ(ಬಿ) ಗ್ರಾಮದಲ್ಲಿಯೂ ಕೂಡ ಗ್ರಾಮದ ಪ್ರಮುಖರು ಲಿಂಗಾಯತ್ ಮಹಾಮಠದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಶಾಸಕ ನಾರಾಯಣರಾವ್​ ಅವರ ಆರೋಗ್ಯ ಸುಧಾರಣೆಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.