ಬಸವಕಲ್ಯಾಣ: ಬಿಜೆಪಿಯಿಂದ ಉಪಚುನಾವಣೆಗೆ ಟಿಕೆಟ್ ಸಿಗದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಪ್ರಚಾರದ ವಾಹನದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ಹುಲಸೂರ ಪಟ್ಟಣದಲ್ಲಿ ಪ್ರಚಾರ ನಡೆಸುವಾಗ ಕಲ್ಲು ತೂರಾಟ ನಡೆಸಲಾಗಿದ್ದು, ವಾಹನದ ಗ್ಲಾಸ್‌ಗಳು ಸೇರಿದಂತೆ ಕೆಲ ಬಿಡಿ ಭಾಗಗಳು ಜಖಂಗೊಂಡಿವೆ. ವಾಹನ ಚಾಲಕನನ್ನು ತಡೆದು ಈ ಕಡೆ ಏಕೆ ಬಂದಿದ್ದೀಯಾ ಎಂದು ಪ್ರಶ್ನಿಸಿ ನಿಂದಿಸಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ವಾಹನ ಚಾಲಕ ಹುಲಸೂರ ಪೊಲೀಸ್ ಠಾಣೆಯಲ್ಲಿ ಉಮೇಶ ಭೂಪಳೆ ಎಂಬುವವನ ವಿರುದ್ಧ ಪ್ರಕರಣ ದಾಖಲಿಸಿದ್ದಾನೆ.