ETV Bharat / state

ಅತ್ಯಾಚಾರ ಖಂಡಿಸಿ ವಿದ್ಯಾರ್ಥಿನಿಯರಿಂದ ಪ್ರತಿಭಟನೆ - basavakalyana students protest against rape case

ಹೈದ್ರಾಬಾದ್​ನ ಪಶು ವೈದ್ಯೆ ಹಾಗೂ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಖಂಡಿಸಿ ಬಸವಕಲ್ಯಾಣದ ನೀಲಾಂಬಿಕಾ ಮಹಿಳಾ ಶಾಲಾ-ಕಾಲೇಜಿನ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.

tudents protest against rape case, ಅತ್ಯಾಚಾರ ಖಂಡಿಸಿ ಬಸವಕಲ್ಯಾಣದಲ್ಲಿ ಪ್ರತಿಭಟನೆ
ಅತ್ಯಾಚಾರ ಖಂಡಿಸಿ ವಿದ್ಯಾರ್ಥಿನಿಯರಿಂದ ಪ್ರತಿಭಟನೆ
author img

By

Published : Dec 4, 2019, 6:43 PM IST

ಬಸವಕಲ್ಯಾಣ (ಬೀದರ್​): ತೆಲಂಗಾಣದ ಹೈದ್ರಾಬಾದ್​ನಲ್ಲಿ ನಡೆದ ಪಶು ವೈದ್ಯೆ ಹಾಗೂ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ ಖಂಡಿಸಿ ನಗರದ ನೀಲಾಂಬಿಕಾ ಮಹಿಳಾ ಶಾಲಾ, ಕಾಲೇಜಿನ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.

ಬಸವಕಲ್ಯಾಣದ ನೀಲಾಂಬಿಕಾ ಮಹಿಳಾ ಶಾಲಾ-ಕಾಲೇಜಿನ ವಿದ್ಯಾರ್ಥಿನಿಯರಿಂದ ಪ್ರತಿಭಟನೆ

ನಗರದ ಗಾಂಧಿ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ವಿದ್ಯಾರ್ಥಿನಿಯರು, ಮಾನವ ಸರಪಳಿ ನಿರ್ಮಿಸಿ ಕೆಲಕಾಲ ರಸ್ತೆ ತಡೆ ನಡೆಸಿದರು. ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ, ಸಾರ್ವಜನಿಕವಾಗಿ ನೇಣಿಗೆ ಏರಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಅಂಬೇಡ್ಕರ್ ವೃತ್ತದಲ್ಲಿ ಕೆಲ ಕಾಲ ವಾಹನ ಸಂಚಾರಕ್ಕೆ ತೊಡಕಾಯಿತು. ಈ ವೇಳೆ ಉಪ ತಹಶೀಲ್ದಾರ್​ ಶಿವಾನಂದ ಮೇತ್ರೆ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

Intro:
( ಗಮನಕ್ಕೆ: ಈ ಸುದ್ದಿ ಬಸವಕಲ್ಯಾಣ ಡೇಟ್‌ಲೈನ್ ಮೇಲೆ ಹಾಕಿ ಸರ್)

ಮೂರು ವಿಡಿಯೊ ಕಳಿಸಲಾಗಿದೆ

ಬಸವಕಲ್ಯಾಣ: ಹೈದ್ರಾಬಾದನ ಪಶು ವೈದ್ಯೆ ಹಾಗೂ ಚಿಂಚೋಳಿ ತಾಲೂಕಿನ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಘಟನೆ ಖಂಡಿಸಿ ಇಲ್ಲಿಯ ನೀಲಾಂಬಿಕಾ ಮಹಿಳಾ ಶಾಲಾ, ಕಾಲೇಜಿನ ವಿದ್ಯಾರ್ಥಿನಿಯರಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಲಾಯಿತು.
ನಗರದ ಗಾಂಧಿ ವೃತ್ತದಿಂದ ಅಂಬೇಡ್ಕರ್ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ವಿದ್ಯಾರ್ಥಿನಿಯರು, ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲ ಕಾಲ ರಸ್ತೆ ತಡೆಸಿದರು, ಹೀಗಾಗಿ ಈ ಮಾರ್ಗದಲ್ಲಿ ಕೆಲ ಕಾಲ ವಾಹನ ಸಂಚಾರಕ್ಕೆ ತೊಡಕಾಯಿತು. ಅತ್ಯಾಚಾರ ನಡೆಸಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ, ಸಾರ್ವಜನಿಕವಾಗಿ ನೇಣಿಗೆ ಏರಿಸುವ ಮೂಲಕ ಕೊಲೆಯಾದ ಮಹಿಳೆಯರಿಗೆ ನ್ಯಾಯ ವದಗಿಸಬೇಕು ಎಂದು ಒತ್ತಾಯಿಸಿದರು.
ಮಹಿಳೆಯರು ಹಾಗೂ ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ಕಾಮುಕರು ಅಟ್ಟಹಾಸ ಮೇರೆಯುತ್ತಿರುವ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿರುವ ಕಾರಣ ಸಮಾಜದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲದಂತೆ ಭಾಸವಾಗುತ್ತಿದೆ. ಮಹಾ ನಗರಗಳಲ್ಲೇ ಮಹಿಳೆಯರಿಗೆ ಸುರಕ್ಷತೆ ಇಲ್ಲವಾದರೇ ಗ್ರಾಮೀಣ ಪ್ರದೇಶದ ಮಹಿಳೆಯರ ಸ್ಥೀತಿ ಹೇಗೆ.? ಎನ್ನುವ ಪ್ರಶ್ನೆ ಕಾಡುತ್ತಿದೆ ಎಂದು ವಿದ್ಯಾರ್ಥಿನಿಯರು ಆತಂಕ ವ್ಯಕ್ತಪಡಿಸಿದರು.
ಹೈದ್ರಾಬಾದನ ಪಶು ವೈದ್ಯೆ ಹಾಗೂ ಚಿಂಚೋಳಿ ತಾಲೂಕಿನ ಯಾಕಾಪೂರ ಗ್ರಾಮದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ದುಷ್ಕರ್ಮಿಗಳಿಗೆ ತಡಮಾಡದೆ ಗಲ್ಲು ಶಿಕ್ಷೆ ವಿಧಿಸುವ ಜೊತೆಗೆ ಆರೋಪಿಗಳೆಲ್ಲರನ್ನು ಸಾರ್ವಜನಿಕವಾಗಿ ನೇಣಿಗೆ ಹಾಕುವ ಮೂಲಕ ಕಾಮುಕರಿಗೆ ಕಠೀಣ ಸಂದೇಶ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು. ಈ ಕುರಿತು ತಹಶೀಲ್ದಾರ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಸ್ಥಳಕ್ಕೆ ಆಗಮಿಸಿದ ಉಪ ತಹಶೀಲ್ದಾರ ಶಿವಾನಂದ ಮೇತ್ರೆ ಅವರಿಗೆ ಸಲ್ಲಿಸಲಾಯಿತು.

ವರದಿ
ಉದಯಕುಮಾರ ಮುಳೆ
ಈ ಟಿವಿ ಭಾರತ
ಬಸವಕಲ್ಯಾಣ

Body:UDAYAKUMAR MULEConclusion:BASAVAKALYAN
ETV Bharat Logo

Copyright © 2025 Ushodaya Enterprises Pvt. Ltd., All Rights Reserved.