ETV Bharat / state

ಸುಪ್ರೀಂಕೋರ್ಟ್​ ಆದೇಶ ಪಾಲಿಸದ ಲೋಕಾಯುಕ್ತ: ಹೈಕೋರ್ಟ್​ ನೋಟಿಸ್ - ಲೋಕಾಯುಕ್ತದಲ್ಲಿ ಎಫ್ಐಆರ್

ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾದ 24 ಗಂಟೆಯಲ್ಲಿ, ಅದನ್ನು ವೆಬ್​​ಸೈಟ್​ನಲ್ಲಿ ದಾಖಲಿಸುವಂತೆ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್​ ಲೋಕಾಯುಕ್ತಕ್ಕೆ ನೋಟಿಸ್ ಜಾರಿ ಮಾಡಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : Oct 18, 2022, 5:04 PM IST

ಬೆಂಗಳೂರು: ಎಫ್‌ಐಆರ್ ದಾಖಲಾದ 24 ಗಂಟೆಯಲ್ಲಿ ಅದನ್ನು ವೆಬ್‌ಸೈಟ್‌ನಲ್ಲಿ ಹಾಕಲು ಲೋಕಾಯುಕ್ತಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿ ಸಂಬಂಧ ಹೈಕೋರ್ಟ್ ಲೋಕಾಯುಕ್ತಕ್ಕೆ ನೋಟಿಸ್ ಜಾರಿ ಮಾಡಿದೆ.

ವಕೀಲ ಎಸ್. ಉಮಾಪತಿ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಪಿ.ಬಿ.ವರಾಲೆ ಅವರಿದ್ದ ವಿಭಾಗೀಯ ಪೀಠ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಲೋಕಾಯುಕ್ತ ಎಡಿಜಿಪಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ಆದೇಶ ನೀಡಿದ್ದ ಸುಪ್ರೀಂಕೋರ್ಟ್: ಎಫ್‌ಐಆರ್ ದಾಖಲಾದ 24 ಗಂಟೆಯಲ್ಲಿ ಅದನ್ನು ಸಂಬಂಧಪಟ್ಟ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು 2016ರಲ್ಲಿ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಇದನ್ನು ಸಿಬಿಐ ಸೇರಿದಂತೆ ಉಳಿದ ತನಿಖಾ ಸಂಸ್ಥೆಗಳು ಪಾಲಿಸುತ್ತಿವೆ. ಸುಪ್ರೀಂಕೋರ್ಟ್ ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ 2018ರಲ್ಲಿ ಎಸಿಬಿ ಮತ್ತು ಬಿಎಂಟಿಎಫ್‌ಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅದನ್ನು ಎಸಿಬಿ ಪಾಲಿಸುತ್ತ ಬಂದಿತ್ತು.

ಇದನ್ನೂ ಓದಿ: ಆವೇಶದಿಂದ ನಡೆದ ಹಲ್ಲೆಯಿಂದ ಪತ್ನಿ ಸತ್ತರೆ ಕೊಲೆ ಎಂದು ಪರಿಗಣಿಸಲಾಗದು: ಹೈಕೋರ್ಟ್​

ಆದೇಶ ಪಾಲಿಸದ ಲೋಕಾಯುಕ್ತ: ಈ ನಡುವೆ ಎಸಿಬಿಯನ್ನು ರದ್ದುಗೊಳಿಸಿ 2022ರ ಆ.11ರಂದು ತೀರ್ಪು ನೀಡಿದ ಹೈಕೋರ್ಟ್, ಲೋಕಾಯುಕ್ತದ ಅಧಿಕಾರವನ್ನು ಮರುಸ್ಥಾಪಿಸಿ ಆದೇಶಿಸಿದೆ. ಆದರೆ ಎಫ್‌ಐಆರ್ ದಾಖಲಾದ 24 ಗಂಟೆಗಳಲ್ಲಿ ಅದನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶವನ್ನು ಲೋಕಾಯುಕ್ತ ಪೊಲೀಸರು ಪಾಲಿಸುತ್ತಿಲ್ಲ.

ಲೋಕಾಯುಕ್ತಕ್ಕೆ ನಿರ್ದೇಶನ ನೀಡುವಂತೆ ಮನವಿ: ಇದರಿಂದ ಮುಂದಿನ ಕಾನೂನು ಪ್ರಕ್ರಿಯೆಗೆ ದೂರುದಾರರು, ಕಕ್ಷಿದಾರರು ಮತ್ತು ವಕೀಲರಿಗೆ ಸಾಕಷ್ಟು ಅನಾನೂಕೂಲವಾಗುತ್ತಿದೆ. ಈ ಬಗ್ಗೆ 2022ರ ಸೆ.19ರಂದು ದೂರು ಕೊಟ್ಟಿದ್ದರೂ ಯಾವುದೇ ಕ್ರಮ ಆಗಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ. ಆದ್ದರಿಂದ ಎಫ್‌ಐಆರ್ ದಾಖಲಾದ 24 ಗಂಟೆಗಳಲ್ಲಿ ಅದನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಲೋಕಾಯುಕ್ತಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.