ETV Bharat / state

ಸೂರ್ಯಕಾಂತ ನಾಗಮಾರಪಳ್ಳಿಗೆ ಸಿಗದ ಟಿಕೆಟ್: ಬಿಜೆಪಿ ವಿರುದ್ಧ ಬೆಂಬಲಿಗರ ಆಕ್ರೋಶ - ಡಿಸಿಸಿ ಬ್ಯಾಂಕ್

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಅವರಿಗೆ ಹೈಕಮಾಂಡ್ ಟಿಕೆಟ್ ನೀಡಿಲ್ಲ.

Suryakanta Nagamarapalli not getting ticket outrage
ಸೂರ್ಯಕಾಂತ ನಾಗಮಾರಪಳ್ಳಿಗೆ ಸಿಗದ ಟಿಕೆಟ್ ಆಕ್ರೋಶ
author img

By

Published : Apr 13, 2023, 9:59 PM IST

Updated : Apr 14, 2023, 12:43 PM IST

ಸೂರ್ಯಕಾಂತ ನಾಗಮಾರಪಳ್ಳಿ ಬೆಂಬಲಿಗರ ಆಕ್ರೋಶ

ಬೀದರ್: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಅವರಿಗೆ ಬೀದರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ನಾಗಮಾರಪಳ್ಳಿ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಮಾಧವನಗರದ ಸೂರ್ಯಕಾಂತ ನಾಗಮಾರಪಳ್ಳಿ ಅವರ ಕಚೇರಿ ಬಳಿ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಕಾರ್ಯಕರ್ತರು ಹಾಗೂ ಬೆಂಬಲಿಗರು, ಬಿಜೆಪಿ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಸೂರ್ಯಕಾಂತ ನಾಗಮಾರಪಳ್ಳಿ ಅವರು ಬೀದರ್ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯನ್ನು ಬೇರು ಮಟ್ಟದಿಂದ ಗಟ್ಟಿಗೊಳಿಸಿದ್ದಾರೆ. ಸರ್ಕಾರದ ಜನಕಲ್ಯಾಣ ಯೋಜನೆಗಳನ್ನು ಅರ್ಹರ ಮನೆ ಬಾಗಿಲಿಗೆ ತಲುಪಿಸಿದ್ದಾರೆ. ಪಕ್ಷವು ಅವರಿಗೆ ಟಿಕೆಟ್ ಕೊಡದೆ ಮೋಸ ಮಾಡಿದೆ. ಚುನಾವಣೆಯಲ್ಲಿ ಮತದಾರರು ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.

ಸೂರ್ಯಕಾಂತ ನಾಗಮಾರಪಳ್ಳಿ ವಿಚಲಿತರಾಗಬೇಕಿಲ್ಲ. ಇಡೀ ಕ್ಷೇತ್ರದ ಜನ ಅವರ ಹಿಂದಿದ್ದಾರೆ. ಈ ಬಾರಿ ಸೂರ್ಯಕಾಂತ ಅವರ ಗೆಲುವನ್ನು ಯಾರೂ ತಡೆಯಲಾಗದು. ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿಯಬೇಕು ಎಂದು ಧರಣಿ ಕುಳಿತು, ಪಟ್ಟು ಹಿಡಿದರು.

ಸೂರ್ಯಕಾಂತ ಸ್ಪರ್ಧೆ ಖಚಿತ: ಸ್ಥಳಕ್ಕೆ ಭೇಟಿ ನೀಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಕಾರ್ಯಕರ್ತರನ್ನು ಸಮಾಧಾನಪಡಿಸಿದರು. ಅವರು ಚುನಾವಣೆಗೆ ಸ್ಪರ್ಧಿಸುವುದು ಖಚಿತ. ಈ ಬಗ್ಗೆ ಯಾವುದೇ ಗೊಂದಲ ಬೇಡ. ಸದ್ಯ ಬೆಂಗಳೂರಿನಲ್ಲಿದ್ದಾರೆ. ಬೀದರ್‌ಗೆ ಬಂದ ನಂತರ ಕಾರ್ಯಕರ್ತರು, ಬೆಂಬಲಿಗರು ಹಾಗೂ ಎಲ್ಲ ಸಮಾಜದ ಮುಖಂಡರ ಸಭೆ ನಡೆಸಿ, ಎಲ್ಲರ ಅಭಿಪ್ರಾಯದ ಮೇರೆಗೆ ಮುಂದಿನ ನಡೆಯ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕೈ​ ಬಂಡಾಯ ಅಭ್ಯರ್ಥಿ ಚಂದ್ರಾಸಿಂಗ್ ನಾಮಪತ್ರ: ಬೀದರ ದಕ್ಷಿಣ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಏ. 13ರಂದು ಗುರುವಾರ ಮಧ್ಯಾಹ್ನ ಚಂದ್ರಾಸಿಂಗ್ ಅವರು ನಾಮಪತ್ರ ಸಲ್ಲಿಸಿದರು. ತಮ್ಮ ನಿವಾಸದಿಂದ ಅದ್ಧೂರಿ ಮೆರವಣಿಗೆಯ ಮೂಲಕ ಬೀದರ ತಹಸೀಲ್ದಾರ್​ ಕಚೇರಿಗೆ ಸಾವಿರಾರು ಬೆಂಬಲಿಗರು, ಕಾರ್ಯಕರ್ತರೊಂದಿಗೆ ಆಗಮಿಸಿದ ಚಂದ್ರಾಸಿಂಗ್ ನಾಮಪತ್ರವನ್ನು ಚುನಾವಣಾಧಿಕಾರಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ಸುರೇಖಾ ಅವರಿಗೆ ಸಲ್ಲಿಸಿದರು.

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಚಂದ್ರಾಸಿಂಗ್ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಯೂಸೂಫ ಅಲಿ ಜಮಾದಾರ, ನಾರಾಯಣರಾವ ಭಂಗಿ, ಅಶೋಕರೆಡ್ಡಿ ನಿರ್ಣಾ ಹಾಗೂ ಧರ್ಮಪತ್ನಿ ಪ್ರಿಯದರ್ಶಿನಿ ಚಂದ್ರಾಸಿಂಗ ಅವರುಗಳು ಸೂಚಕರಾಗಿ ಸಾಥ್ ನೀಡಿದರು. ಇದಕ್ಕೂ ಮುನ್ನ ಕ್ಷೇತ್ರದ ಹಲವು ಮಂದಿರಗಳಿಗೆ ತೆರಳಿ ದೇವರ ಆಶೀರ್ವಾದ ಪಡೆದರು.

ಇದನ್ನೂಓದಿ:ಕುಟುಂಬ ರಾಜಕಾರಣ, ಕ್ರಿಮಿನಲ್​ಗಳ ಸಮ್ಮಿಲನವೇ ಬಿಜೆಪಿ: ಗೌರವ್ ವಲ್ಲಭ್

Last Updated : Apr 14, 2023, 12:43 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.