ETV Bharat / state

ಬೀದರ್ ಬಿಕೆಐಟಿ ಕಾರ್ಯಕ್ರಮದಲ್ಲಿ ತೆಲಂಗಾಣ ಸಚಿವ ಪ್ರಶಾಂತ್ ರೆಡ್ಡಿ ಭಾಗಿ.. 10 ಲಕ್ಷ ರೂ. ದೇಣಿಗೆ - BKIT old students program

ಭಾಲ್ಕಿ ಪಟ್ಟಣದ ಭೀಮಣ್ಣ ಖಂಡ್ರೆ ಇನ್ಸ್​ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತೆಲಂಗಾಣದ ವಸತಿ ಸಚಿವ ಪ್ರಶಾಂತ ರೆಡ್ಡಿ 10 ಲಕ್ಷ ರೂ. ದೇಣಿಗೆ ನೀಡಿದರು.

telangana-minister-prashant-reddy-participates-in-bkit-program
ಬೀದರ್: ಬಿಕೆಐಟಿ ಕಾರ್ಯಕ್ರಮದಲ್ಲಿ ತೆಲಂಗಾಣ ಸಚಿವ ಪ್ರಶಾಂತ್ ರೆಡ್ಡಿ ಭಾಗಿ, 10 ಲಕ್ಷ ದೇಣಿಗೆ
author img

By

Published : Jun 25, 2022, 9:04 PM IST

ಬೀದರ್​​: ವ್ಯಕ್ತಿಯೋರ್ವನ ಉನ್ನತೀಕರಣದಲ್ಲಿ ಶಿಕ್ಷಕರು ಹಾಗೂ ವಿದ್ಯಾಸಂಸ್ಥೆಯ ಪಾತ್ರ ಪ್ರಮುಖವಾಗಿದೆ. ಅಂತಹ ಅದ್ಭುತ ಸ್ಪಂದನೆ ಭೀಮಣ್ಣ ಖಂಡ್ರೆ ಇನ್ಸ್​ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಿಂದ ದೊರೆತಿದ್ದರಿಂದಲೇ ನಾನು ಯಶಸ್ಸಿನ ಹಾದಿಯಲ್ಲಿ ಸಾಗಲು ಸಾಧ್ಯವಾಯಿತು ಎಂದು ತೆಲಂಗಾಣದ ಲೋಕೋಪಯೋಗಿ ಮತ್ತು ವಸತಿ ಇಲಾಖೆ ಸಚಿವ ಪ್ರಶಾಂತ ರೆಡ್ಡಿ ಹೇಳಿದರು.

ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ಭೀಮಣ್ಣ ಖಂಡ್ರೆ ಇನ್ಸ್​ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ನಡೆದ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಈ ಸಂಸ್ಥೆಯಲ್ಲಿ ಕಲಿತ ಶೇ. 90ರಷ್ಟು ವಿದ್ಯಾರ್ಥಿಗಳು ದೇಶ ಸೇರಿದಂತೆ ವಿದೇಶಗಳಲ್ಲಿಯೂ ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಖಂಡ್ರೆ ಮನೆತನ ಇರದಿದ್ದರೆ ಈ ಸಂಸ್ಥೆಯೂ ಇರುತ್ತಿರಲಿಲ್ಲ, ಭಾಲ್ಕಿ ಕ್ಷೇತ್ರವೂ ಅಭಿವೃದ್ಧಿ ಆಗುತ್ತಿರಲಿಲ್ಲ. ಕ್ಷೇತ್ರಕ್ಕೆ ಭೀಮಣ್ಣ ಖಂಡ್ರೆಯವರ ಕೊಡುಗೆ ಅಪಾರ ಎಂದರು.

telangana-minister-prashant-reddy-participates-in-bkit-program
ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಸಮಾರಂಭ

ಕೆಪಿಸಿಸಿ ಕಾರ್ಯಾಧ್ಯಕ್ಷ, ಭಾಲ್ಕಿ ಶಾಸಕ ಈಶ್ವರ್ ಖಂಡ್ರೆ ಮಾತನಾಡಿ, ಭೀಮಣ್ಣ ಖಂಡ್ರೆ ಇನ್ಸ್​ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಿಂದ ಕಲಿತ ವಿದ್ಯಾರ್ಥಿಗಳು ದೇಶ, ವಿದೇಶದಲ್ಲಿ ಕೆಲಸ ಮಾಡುತ್ತಿರುವುದು ನಮ್ಮ ಸಂಸ್ಥೆಗೆ ಹೆಮ್ಮೆಯಾಗಿದೆ. 2,000 ವಿದ್ಯಾರ್ಥಿಗಳು ವಿದೇಶದಲ್ಲಿ ಹಾಗೂ 10,000 ವಿದ್ಯಾರ್ಥಿಗಳು ದೇಶದ ವಿವಿಧ ನಗರಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ನೀವೆಲ್ಲ ಬಂದು ಹಳೆಯ ನೆನಪು ಮೆಲುಕು ಹಾಕಿದ್ದು ತುಂಬಾ ಸಂತೋಷವಾಗಿದೆ ಎಂದು ತಿಳಿಸಿದರು.

10 ಲಕ್ಷ ರೂ. ದೇಣಿಗೆ: ಇದೇ ವೇಳೆ ಹಳೆ ವಿದ್ಯಾರ್ಥಿ ಸಂಘಕ್ಕೆ ಸಚಿವ ಪ್ರಶಾಂತ್ ರೆಡ್ಡಿ ಅವರು 10 ಲಕ್ಷ ರೂ. ದೇಣಿಗೆ ನೀಡಿದರು. 1984ರಲ್ಲಿ ಅವರು ಸಿವಿಲ್ ಇಂಜಿನಿಯರಿಂಗ್ ಪ್ರವೇಶ ಪಡೆದು 1989 ರಲ್ಲಿ ಡಿಗ್ರಿ ಪಡೆದಿದ್ದರು.

ಇದನ್ನೂ ಓದಿ: ಯಾದಗಿರಿ ಹೊಸ ಬಸ್ ನಿಲ್ದಾಣದಲ್ಲಿ ಹೆಣ್ಣು ಶಿಶು ಪತ್ತೆ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.