ಬೀದರ್: ನಿಯಂತ್ರಣ ತಪ್ಪಿದ ಎರಡು ಬೈಕಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಲಿ ಪಟ್ಟಣದ ಶಿವಾಜಿ ವೃತದಲ್ಲಿ ನಡೆದಿದೆ.
ಜಿಲ್ಲೆಯ ಭಾಲ್ಲಿ ಪಟ್ಟಣದ ಶಿವಾಜಿ ವೃತದಲ್ಲಿ ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ತಳವಾಡ ಗ್ರಾಮದ ಸಂಗಶೆಟ್ಟಿ(55) ಹಾಗೂ ತೆಗಂಪೂರ್ ಗ್ರಾಮದ ಸಂಗಶೆಟ್ಟಿ(45) ಎಂಬುವರು ಸಾವನ್ನಪ್ಪಿದ್ದಾರೆ.
ಇನ್ನು ಅಪಘಾತದಲ್ಲಿ ಒಬ್ಬರಿಗೆ ಗಂಭೀರವಾದ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯ ಕುರಿತು ಭಾಲ್ಕಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.