ETV Bharat / state

ಟಿಕೆಟ್​​ ಯಾರಿಗೆ ಕೊಡಬೇಕು ಎನ್ನುವುದನ್ನು ಹೈಕಮಾಂಡ್ ನಿರ್ಣಯಿಸುತ್ತೆ: ಮಲ್ಲಿಕಾರ್ಜುನ ಖೂಬಾ

ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಆಕಾಂಕ್ಷಿ ತಾವಾಗಿದ್ದು, ಹೈ ಕಮಾಂಡ್​ನಿಂದ ಟಿಕೆಟ್ ನೀಡಿ ಸ್ಪರ್ಧಿಸುವಂತೆ ತಿಳಿಸಿದರೆ ಸ್ಪರ್ಧಿಸುತ್ತೇನೆ. ಇಲ್ಲಿ ಪಕ್ಷದ ಅಭ್ಯರ್ಥಿ ಯಾರೇ ಆದರೂ ಪಕ್ಷ ಗೆಲ್ಲಿಸುವುದೇ ತಮ್ಮ ಉದ್ದೇಶ ಎಂದು ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಖೂಬಾ ಹೇಳಿದ್ದಾರೆ.

ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಖೂಬಾ
ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಖೂಬಾ
author img

By

Published : Oct 9, 2020, 9:32 PM IST

Updated : Oct 9, 2020, 10:35 PM IST

ಬಸವಕಲ್ಯಾಣ (ಬೀದರ್​): ಶಾಸಕ ಬಿ. ನಾರಾಯಣರಾವ್​ ಅವರ ನಿಧನದಿಂದ ಕ್ಷೇತ್ರದಲ್ಲಿ ಮುಂಬರುವ ದಿನಗಳಲ್ಲಿ ನಡೆವ ಉಪಚುನಾವಣೆಯಲ್ಲಿ ಟಿಕೆಟ್​ ಯಾರಿಗೆ ಕೊಡಬೇಕು ಎನ್ನುವುದನ್ನು ಬಿಜೆಪಿ ಹೈಕಮಾಂಡ್ ನಿರ್ಣಯಿಸುತ್ತದೆ ಎಂದು ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಖೂಬಾ ಹೇಳಿದ್ದಾರೆ.

ತಮ್ಮ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಆಕಾಂಕ್ಷಿ ತಾವಾಗಿದ್ದು, ಹೈ ಕಮಾಂಡ್​ನಿಂದ ಟಿಕೆಟ್ ನೀಡಿ ಸ್ಪರ್ಧಿಸುವಂತೆ ತಿಳಿಸಿದರೆ ಸ್ಪರ್ಧಿಸುತ್ತೇನೆ. ಇಲ್ಲಿ ಪಕ್ಷದ ಅಭ್ಯರ್ಥಿ ಯಾರೇ ಆದರೂ ಪಕ್ಷ ಗೆಲ್ಲಿಸುವುದೇ ತಮ್ಮ ಉದ್ದೇಶ ಎಂದು ಖೂಬಾ ಸ್ಪಷ್ಟಪಡಿಸಿದರು. ಮಲ್ಲಿಕಾರ್ಜುನ ಖೂಬಾ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್ , ಜೆಡಿಎಸ್ ಸೇರಲಿದ್ದಾರೆ ಎಂದು ಕೆಲವರು ಕ್ಷೇತ್ರದ ಮತದಾರರಲ್ಲಿ ಸುಳ್ಳು ಪ್ರಚಾರ ಮಾಡಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಈ ರೀತಿ ಅಪಪ್ರಚಾರ ಸಲ್ಲದು. ಸದ್ಯ ನಾನು ಬಿಜೆಪಿ ಪಕ್ಷದಲ್ಲಿದ್ದು, ಬಿಜೆಪಿಯಲ್ಲಿಯೇ ಉಳಿಯಲಿದ್ದೇನೆ ಹೊರತು ಯಾವ ಪಕ್ಷಕ್ಕೂ ಹೋಗುವುದಿಲ್ಲ ಎಂದರು.

ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಖೂಬಾ

ಬಿಜೆಪಿಯಲ್ಲಿ ಸುಮಾರು 12 ಜನ ಆಕಾಂಕ್ಷಿಗಳಿದ್ದಾರೆ. ಆದರೆ ಕೆಲವರು ಟಿಕೆಟ್ ನನಗೆ ಸಿಗಲಿದೆ ಎಂದು ಈಗಾಗಲೇ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಪಕ್ಷದ ಹೈಕಮಾಂಡ್ ಎಲ್ಲವೂ ನೋಡಿಕೊಂಡೇ ಗೆಲ್ಲುವ ವ್ಯಕ್ತಿಗಳಿಗೆ ಮಣೆ ಹಾಕುತ್ತಾರೆ ಎನ್ನುವ ವಿಶ್ವಾಸವಿದೆ. ಯಾರೂ ಸಹ ಮತದಾರರಲ್ಲಿ ಹಾಗೂ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಸಬಾರದು ಎಂದರು. ಎಮ್​ಎಲ್​​ಸಿ ಚುನಾವಣೆಯ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಾಗಿ ಮನೆಯ ಮೇಲಿನ ಬಿಜೆಪಿ ಬಾವುಟ, ಬ್ಯಾನರ್ ತೆಗೆಸಲಾಗಿದೆ. ಇದಕ್ಕೆ ಬೇರೆ ಅರ್ಥ ಕಲ್ಪಿಸಬಾರದು. ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ದಿ ಕೆಲಸಗಳು ನಂಬಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಬಿಟ್ಟು ಬಿಜೆಪಿಗೆ ಬಂದಿದ್ದೇನೆ. ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದೇನೆ. ಮುಂದೆಯೂ ಬಿಜೆಪಿಯಲ್ಲಿಯೇ ಇರುತ್ತೇನೆ ಎಂದರು.

ಬಸವಕಲ್ಯಾಣದಲ್ಲಿ ಇತ್ತೀಚಿನ ದಿನಗಳಲ್ಲಿ ಹೊರಗಿನಿಂದ ಬಂದು ಸ್ಪರ್ಧಿಸುವ ಬಯಕೆ ಇಟ್ಟ ಕೆಲವರಿದ್ದಾರೆ. ಆದರೆ ಎಲ್ಲರೂ ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಬರಬೇಕು. ದಿ.ಬಿ.ನಾರಾಯಣರಾವ್​ ಅವರು ಶಾಸಕರಾಗಿದ್ದ ಸಂದರ್ಭದಲ್ಲಿ ಬಸವಕಲ್ಯಾಣ ಅಭಿವೃದ್ದಿಗಾಗಿ ಸಹಕಾರ ನೀಡಿದ್ದೇನೆ. ಅಭಿವೃದ್ದಿಗಾಗಿ ಯಾವಾಗಲೂ ಸಹಕಾರ ಇರುತ್ತದೆ. ನನ್ನ ಅವಧಿಯಲ್ಲಿ ಸರ್ಕಾರ ವಿವಿಧ ಇಲಾಖೆಗಳಿಗೆ 80 ಕೋಟಿ ರೂ. ಮಂಜೂರು ಮಾಡಿತ್ತು. ಈ ಅವಧಿಯಲ್ಲಿ ಮಾಡಿರುವ ಕಾರ್ಯ ಜನರ ಮುಂದಿದೆ ಎಂದರು.

Last Updated : Oct 9, 2020, 10:35 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.