ಬೀದರ್: ದೇವರ ದರ್ಶನಕ್ಕೆ ಹೋದವರು ರಸ್ತೆ ಅಪಘಾತಕ್ಕೀಡಾಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಮನಾಬಾದ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬುಲೆರೋ ವಾಹವೊಂದು ಒಮಿನಿ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, 7 ಜನರಿಗೆ ಗಂಭೀರ ಗಾಯವಾಗಿದೆ. ಮೃತರನ್ನು ಬೀದರ್ ತಾಲೂಕಿನ ಚಿಲ್ಲರ್ಗಿ ಗ್ರಾಮದ ರಾಯಪ್ಪ ಘಾಳೆಪ್ಪ (45), ಶಿವರಾಜ್ ಪುಂಡಲಿಕ (40) ಹಾಗೂ ತುಕಾರಾಮ್ ಮಾರುತಿ (55) ಎಂದು ಗುರುತಿಸಲಾಗಿದೆ.
ದಸರಾ ಹಿನ್ನೆಲೆ ಮಹಾರಾಷ್ಟ್ರದ ಉಸ್ಮಾನಾಬಾದ್ ಜಿಲ್ಲೆಯ ತುಳಜಾಪುರದ ಭವಾನಿ ಮಾತೆಯ ದರ್ಶನಕ್ಕಾಗಿ ಹೋಗಿದ್ದರು. ದರ್ಶನ ಪಡೆದು ಹಿಂದುರಿಗಿ ವಾಪಸಾಗುವಾಗ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ 7 ಜನರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹುಮನಾಬಾದ್ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.