ಬೀದರ್: ಮಹಾರಾಷ್ಟ್ರದಲ್ಲಿ ಕೊರೊನಾ ಅಬ್ಬರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಅಲ್ಲಿನ ಸರ್ಕಾರ ಸಂಡೇ ಜನತಾ ಕರ್ಫ್ಯೂ ಜಾರಿಗೊಳಿಸಿದ್ರೆ, ರಾಜ್ಯದ ಗಡಿ ಭಾಗದಲ್ಲಿ ತೀವ್ರ ನಿಗಾ ವಹಿಸಿ ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲೆಯ ಕಮಲನಗರ, ಬಸವಕಲ್ಯಾಣ ತಾಲೂಕಿನ ಚಂಡಕಾಪೂರ್ ಹಾಗೂ ಹುಲಸೂರು ಬಳಿ ಚೆಕ್ ಪೋಸ್ಟ್ಗಳನ್ನು ಸ್ಥಾಪನೆ ಮಾಡಿ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಪ್ರವೇಶಿಸುವ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಲಾಗ್ತಿದೆ.
ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರು ಕೊರೊನಾ ಟೆಸ್ಟ್ ವರದಿ(ಆರ್ಟಿಪಿಸಿ) ಪಡೆದುಕೊಂಡು 72 ಗಂಟೆಯೊಳಗಾಗಿ ಬಂದವರಿಗೆ ಮಾತ್ರ ಪ್ರವೇಶ ನೀಡಲಾಗ್ತಿದ್ದು, ಈ ವರದಿ ಇಲ್ಲದವರಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡ್ತಿಲ್ಲ ಎಂದು ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ತಿಳಿಸಿದ್ದಾರೆ.