ಬೀದರ್: ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಅಡ್ಡಾದಿಡ್ಡಿಯಾಗಿ ಹೋದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಇದರಿಂದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಜಿಲ್ಲೆಯ ಭಾಲ್ಕಿ ತಾಲೂಕಿನ ಸಿದ್ದಾಪುರವಾಡಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಅಡ್ಡಾದಿಡ್ಡಿ ಚಲಿಸಿದ ಪರಿಣಾಮ ಮಹಾರಾಷ್ಟ್ರ ಸಾರಿಗೆ ಬಸ್, ಬೈಕ್ಗೆ ಡಿಕ್ಕಿ ಹೊಡೆದಿದ್ದು ವಾಹನಗಳು ನುಜ್ಜುಗುಜ್ಜಾಗಿವೆ. ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಪಾಂಡುರಂಗ ಹಾಗೂ ಸಂಜೀವಕುಮಾರ್ ಎಂಬುವವರಿಗೆ ಗಾಯಗಳಾಗಿವೆ.
ಸ್ಥಳಕ್ಕೆ ಭಾಲ್ಕಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.